ಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ: ಬಿ.ವೈ.ವಿಜಯೇಂದ್ರ

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ ಮತ್ತು ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Written by - Puttaraj K Alur | Last Updated : Nov 26, 2023, 04:16 PM IST
  • ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ
  • ಬಿಜೆಪಿ ಕಾರ್ಯಕರ್ತರ ನೆರವಿಗೆ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
  • ಬಿಜೆಪಿ ಕಾರ್ಯಕರ್ತರಿಗೆ ತೊಂದರೆ, ಬೆದರಿಕೆ ಮತ್ತು ಕಿರುಕುಳಗಳು ಎದುರಾದರೆ ಪಕ್ಷ ತಕ್ಷಣವೇ ಅವರ ನೆರವಿಗೆ ಬರಲಿದೆ
ಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ: ಬಿ.ವೈ.ವಿಜಯೇಂದ್ರ title=
ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂ!

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸೋಮಣ್ಣ ಹೇಳಿಕೆ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದಬೇಕಿಲ್ಲ’ವೆಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 10ಕ್ಕೆ ಹೈ ಕಮಾಂಡ್ ಭೇಟಿ ಎಂದ ಸೋಮಣ್ಣ

 ‘ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ ಮತ್ತು ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು’ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News