ಬೆಂಗಳೂರು: ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಬಂದ್ ನಡೆಸುವುದಾಗಿ ಶುಕ್ರವಾರ ಸದನದಲ್ಲಿ ಹೇಳಿದ್ದ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, 'ನಾನು ಬಂದ್'ಗೆ ಕರೆ ನೀಡಿಲ್ಲ, ರೈತರೇ ಸ್ವಯಂ ಪ್ರೇರಿತ ಬಂದ್ ಮಾಡುತ್ತಾರೆ. ಅವರ ಪರವಾಗಿ ನಾನು ಸದನದಲ್ಲಿ ಮಾತನಾಡಿರುವುದಾಗಿ' ಶನಿವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ, ರೈತರ ಸಾಲ ಮನ್ನಾ ಮಾಡದೇ ಇದ್ದರೆ ರೈತರೇ ಸ್ವಯಂ ಪ್ರೇರಿತ ಬಂದ್ ಬಂದ್ ನಡೆಸುತ್ತಾರೆ ಎಂದು ಹೇಳಿದ್ದೆ. ನಾವು ಬಂದ್ ಗೆ ಕರೆ ನೀಡಿಲ್ಲ ಎಂದು ಹೇಳಿದರು. ಸೋಮವಾರದ ಬಂದ್ ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಇದೇ ಸಂದರ್ಭದಲ್ಲಿ ಬಿಎಸ್ ವೈ ತಿಳಿಸಿದರು.


ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ಆದರೆ ಮುಖ್ಯಮಂತ್ರಿಯಾದ ಮೇಲೆ ಪೂರ್ಣ ಬಹುಮತದಿಂದ ಅಧಿಕಾರ ಸಿಕ್ಕಿದ್ದಿದ್ದರೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೆ ಎಂದು ಯೂ ಟರ್ನ್ ಹೊಡೆದಿದ್ದಾರೆ. ಇದರಿಂದ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ರೈತರು ಬೀದಿಗಿಳಿದು ಸ್ವಯಂ ಪ್ರೇರಿತವಾಗಿ ಹೋರಾಟ ನಡೆಸುತ್ತಾರೆ ಎಂದು ಹೇಳಿದ್ದೆ ಎಂದು ಯಡಿಯೂರಪ್ಪ ತಿಳಿಸಿದರು.