ಕೋಟಿಗಟ್ಟಲೆ ಡೀಲ್ ಮಾಡಿದ ಚೈತ್ರಾ ಕುಂದಾಪುರ ಬೆಂಬಲಕ್ಕೆ ನಾವು ನಿಂತಿಲ್ಲ-ಸಚಿವೆ ಶೋಭಾ ಕರಂದ್ಲಾಜೆ

Shobha Karandlaje on Chaitra Kundapura: ಹಣ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನಮಗೂ ಆ ಯುವತಿಗೂ ಸಂಬಂಧ ಇಲ್ಲ ಹಾಗೆಯೇ ಆಕೆಯ ಬೆಂಬಲಕ್ಕೆ ನಾವು ನಿಂತಿಲ್ಲ ಎಂದು ಹೇಳಿದ್ದಾರೆ.  

Written by - Savita M B | Last Updated : Sep 16, 2023, 01:34 PM IST
  • ಹಣ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ\
  • ಪ್ರಕರಣ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯಿಸಿದ್ದಾರೆ
  • ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದಿದ್ದಾರೆ
ಕೋಟಿಗಟ್ಟಲೆ ಡೀಲ್ ಮಾಡಿದ ಚೈತ್ರಾ ಕುಂದಾಪುರ ಬೆಂಬಲಕ್ಕೆ ನಾವು ನಿಂತಿಲ್ಲ-ಸಚಿವೆ ಶೋಭಾ ಕರಂದ್ಲಾಜೆ title=

Chaitra Kundapura Case: ಕೋಟಿಗಟ್ಟಲೇ ಹಣ ವಂಚನೆ ಆರೋಪದ ಮೇಲೆ ಈಗಾಗಲೇ ಹಿಂದೂ ಸಂಘದ ಮುಖಂಡೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಾನು ಯಾರ ಬಳಿಯೂ ಹಣ ಪಡೆದು ವಂಚನೆ ಮಾಡಿಲ್ಲ, ಆದರೂ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹಿಂದೂ ಸಂಘದ ನಾಯಕಿ ಚೈತ್ರಾ ಕುಂದಾಪುರ ಆರೋಪಿಸಿದ್ದಾರೆ.

ಈ ಪ್ರಕರಣದ ಕುರಿತು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಕೇಂದ್ರ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಶೋಭಾ ಕರಂದ್ಲಾಜೆ  ಅವರು  "ಚೈತ್ರಾ ಕುಂದಾಪುರ ಅವರೊಂದಿಗೆ ಯಾವುದೇ ಸಂಬಂಧವಿಲ್ಲ, ಇಲ್ಲಿಯವರೆಗೆ ಅವರು ಯಾರು ಎಂದು ನನಗೆ ತಿಳಿದಿಲ್ಲ., ತಪ್ಪು ಯಾರೇ ಮಾಡಿದರೂ ಶಿಕ್ಷೆಯಾಗಬೇಕು" ಎಂದಿದ್ದಾರೆ. 

ಇದನ್ನೂ ಓದಿ-ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ

"ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಯಬೇಕು, ಕರ್ನಾಟಕದ ಬಿಜೆಪಿ ನಾಯಕರ ಹೆಸರನ್ನು ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಯಾರನ್ನೂ ಬಿಡಬಾರದು" ಎಂದು  ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಇನ್ನು "ಚೈತ್ರಾ ಕುಂದಾಪುರ ಅವರು ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದಾಗ ಎಲ್ಲರೊಂದಿಗೆ ಫೋಟೋ ತೆಗೆಸಿಕೊಂಡಿರಬಹುದು ಆದರೆ ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ, ಅವರು ನಮ್ಮ ಸಂಪರ್ಕಕ್ಕೂ ಬಂದಿಲ್ಲ" ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ-ಅಪಘಾತ ಮಾಹಿತಿ ನೀಡುವ ರಕ್ಷಾ ಕ್ಯೂಆರ್‌ ಕೋಡ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News