ನಟ ದರ್ಶನ್‌ಗೆ ನಾವು ಯಾವುದೇ ರೀತಿ ಸಪೋರ್ಟ್ ಮಾಡ್ತಿಲ್ಲ: ಸಿಎಂ ಸಿದ್ದರಾಮಯ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ವಿಐಪಿ ಟ್ರೀಟ್‌ಮೆಂಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ʼನಾವು ಯಾರ ಪರವೂ ಇಲ್ಲ. ಜೈಲಿನಲ್ಲಿ ನಟನಿಗೆ ರಾಜಾತಿಥ್ಯ ನೀಡಿದ ತಪ್ಪಿಗೆ 9 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ ಅಂತಾ ಹೇಳಿದ್ದಾರೆ.

Written by - Puttaraj K Alur | Last Updated : Aug 30, 2024, 11:25 PM IST
  • ನಟ ದರ್ಶನ್ ವಿಚಾರದಲ್ಲಿ ನಮ್ಮ ಸರ್ಕಾರ ಯಾರ ಪರವಾಗಿಯೂ ಕೆಲಸ ಮಾಡುತ್ತಿಲ್ಲ
  • ಜೈಲಿನಲ್ಲಿ ನಟನಿಗೆ ರಾಜಾತಿಥ್ಯ ನೀಡಿದ ತಪ್ಪಿಗೆ 9 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ
  • ಜೈಲಿನಲ್ಲಿ ಆಗಿರುವ ಲೋಪಗಳ ಬಗ್ಗೆ ಡಿಜಿಪಿಗೆ ನೋಟಿಸ್ ನೀಡಿದ್ದೇವೆಂದ ಸಿದ್ದರಾಮಯ್ಯ
ನಟ ದರ್ಶನ್‌ಗೆ ನಾವು ಯಾವುದೇ ರೀತಿ ಸಪೋರ್ಟ್ ಮಾಡ್ತಿಲ್ಲ: ಸಿಎಂ ಸಿದ್ದರಾಮಯ್ಯ title=
ದರ್ಶನ್‌ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

CM Siddaramaiah on actor Darshan: ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ವಿಚಾರದಲ್ಲಿ ನಮ್ಮ ಸರ್ಕಾರ ಯಾರ ಪರವಾಗಿಯೂ ಕೆಲಸ ಮಾಡುತ್ತಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. 

ಇದಕ್ಕೆ ಸಂಬಂಧಿಸಿದಂತೆ ಫೋಟೋಗಳು ಸಹ ಸೋಷಿಯಲ್‌ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಇದೇ  ಕಾರಣಕ್ಕೆ ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ ಸಹ ವ್ಯಕ್ತವಾಗಿತ್ತು. ಜೈಲಿನಲ್ಲಿ ಖೈದಿಗಳಿಗೆ ಯಾವುದೇ ಕಟ್ಟುನಿಟ್ಟು ಇಲ್ಲದೇ ಇರುವುದು ಸರ್ಕಾರದ ವೈಫಲ್ಯ ಎಂದೇ ಹೇಳಲಾಗುತ್ತಿತ್ತು.

ಇದನ್ನೂ ಓದಿ: ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ವಿಐಪಿ ಟ್ರೀಟ್‌ಮೆಂಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ʼನಾವು ಯಾರ ಪರವೂ ಇಲ್ಲ. ಜೈಲಿನಲ್ಲಿ ನಟನಿಗೆ ರಾಜಾತಿಥ್ಯ ನೀಡಿದ ತಪ್ಪಿಗೆ 9 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಯಾರನ್ನೂ ನಾವು ರಕ್ಷಿಸಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. 

ಕಾನೂನು ಪ್ರಕಾರ ಯಾವ ರೀತಿಯ ಕ್ರಮ ಕೈಗೊಳ್ಳಬೇಕೋ ಅದನ್ನೇ ಮಾಡಲಾಗುತ್ತದೆ. ಜೈಲಿನಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಡಿಜಿಪಿಗೆ ನೋಟಿಸ್ ನೀಡಿದ್ದೇವೆ. ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: Fraud Case: 8 ಮದುವೆ, ಸಾಲ ಕೊಡಿಸ್ತೀನಿ ಅಂತಾ 38 ಕೋಟಿ ವಂಚಿಸಿದ ನಕಲಿ JDS ಕಾರ್ಯಾಧ್ಯಕ್ಷೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News