CM Siddaramaiah on actor Darshan: ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ವಿಚಾರದಲ್ಲಿ ನಮ್ಮ ಸರ್ಕಾರ ಯಾರ ಪರವಾಗಿಯೂ ಕೆಲಸ ಮಾಡುತ್ತಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. 


COMMERCIAL BREAK
SCROLL TO CONTINUE READING

ಇದಕ್ಕೆ ಸಂಬಂಧಿಸಿದಂತೆ ಫೋಟೋಗಳು ಸಹ ಸೋಷಿಯಲ್‌ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಇದೇ  ಕಾರಣಕ್ಕೆ ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ ಸಹ ವ್ಯಕ್ತವಾಗಿತ್ತು. ಜೈಲಿನಲ್ಲಿ ಖೈದಿಗಳಿಗೆ ಯಾವುದೇ ಕಟ್ಟುನಿಟ್ಟು ಇಲ್ಲದೇ ಇರುವುದು ಸರ್ಕಾರದ ವೈಫಲ್ಯ ಎಂದೇ ಹೇಳಲಾಗುತ್ತಿತ್ತು.


ಇದನ್ನೂ ಓದಿ: ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್


ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ವಿಐಪಿ ಟ್ರೀಟ್‌ಮೆಂಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ʼನಾವು ಯಾರ ಪರವೂ ಇಲ್ಲ. ಜೈಲಿನಲ್ಲಿ ನಟನಿಗೆ ರಾಜಾತಿಥ್ಯ ನೀಡಿದ ತಪ್ಪಿಗೆ 9 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಯಾರನ್ನೂ ನಾವು ರಕ್ಷಿಸಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. 


ಕಾನೂನು ಪ್ರಕಾರ ಯಾವ ರೀತಿಯ ಕ್ರಮ ಕೈಗೊಳ್ಳಬೇಕೋ ಅದನ್ನೇ ಮಾಡಲಾಗುತ್ತದೆ. ಜೈಲಿನಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಡಿಜಿಪಿಗೆ ನೋಟಿಸ್ ನೀಡಿದ್ದೇವೆ. ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ ಅವರು ತಿಳಿಸಿದ್ದಾರೆ. 


ಇದನ್ನೂ ಓದಿ: Fraud Case: 8 ಮದುವೆ, ಸಾಲ ಕೊಡಿಸ್ತೀನಿ ಅಂತಾ 38 ಕೋಟಿ ವಂಚಿಸಿದ ನಕಲಿ JDS ಕಾರ್ಯಾಧ್ಯಕ್ಷೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.