ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ.ಹೀಗಾಗಿ ಬಿಜೆಪಿ, ಖಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ನಾವು ಕಲಿಯುವ ಅಗತ್ಯವಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನಂತರ ಇದೆ ಮೊದಲ ಬಾರಿಗೆ ಆಗಮಿಸಿದ್ದ ಅವರನ್ನು ಸನ್ಮಾನಿಸಲು ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.


ಸರ್ವೊದಯ ಸಮಾವೇಶದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಮಾತುಗಳು.


ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರುವ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಶ್ರೀ ರಾಹುಲ್ ಗಾಂಧಿ ಅವರಿಗೆ ಮತ್ತು ವಿಶೇಷವಾಗಿ ಇಡೀ ರಾಷ್ಟ್ರದಲ್ಲಿನ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ವಯಕ್ತಿಕವಾಗಿ ಧನ್ಯವಾದ ಅರ್ಪಿಸುತ್ತೇನೆ.


ಇದನ್ನೂ ಓದಿ: T20 World Cup 2022ರಲ್ಲಿ ವಿರಾಟ್ ಕಾರುಬಾರು: ಅಬ್ಬಬ್ಬಾ.. ಕೊಹ್ಲಿ ಹೆಸರಲ್ಲಿದೆ ಇಷ್ಟೊಂದು ದಾಖಲೆಗಳು!


ಖರ್ಗೆ ಅವರ ಆಯ್ಕೆ ಕೇವಲ ಕರ್ನಾಟಕಕ್ಕೆ ಹೆಮ್ಮೆ ಅಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ, ಕಚ್ ನಿಂದ ಕೊಯಿಮಾ  ವರೆಗಿನ ಕೊಟ್ಯಾಂತರ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯ. ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪುಣ್ಯ.ಇದೊಂದು ಪವಿತ್ರವಾದ ಪಕ್ಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವ ಪಕ್ಷವಾಗಿದೆ.


ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗುವ ಮುನ್ನ ಬಿಜೆಪಿ ಅವರು ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಆರೋಪ ಮಾಡುತ್ತಿದ್ರು. ಪ್ರಪಂಚದಲ್ಲಿ ಅತ್ಯಂತ ಹಳೆಯ ಹಾಗೂ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ನಮ್ಮದು. ನಾವು ಬಿಜೆಪಿಯವರಂತೆ ಮಿಸ್ ಕಾಲ್ ಕೊಟ್ಟು ಸದಸ್ಯರನ್ನು ನೇಮಕ ಮಾಡಿಲ್ಲ.


ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಮೊದಲ ಅಧ್ಯಕ್ಷರಾಗಿ 1885ರಲ್ಲಿ W.C.ಬ್ಯಾನರ್ಜಿ ಅವರು, ಎರಡನೆ ಅಧ್ಯಕ್ಷರಾಗಿ 1886ರಲ್ಲಿ ದಾದಾಬಾಯಿ ನವರೋಜಿ ಅವರು, 1887ರಲ್ಲಿ ಬದ್ರುದ್ದೀನ್ ತ್ಯಾಬ್ಜಿ ಅವರು ಅಧ್ಯಕ್ಷರಾಗಿದ್ದಾರೆ. ನಮ್ಮ ಪಕ್ಷದಲ್ಲಿ ಪಾರ್ಸಿ, ಮುಸಲ್ಮಾನರು, ಕ್ರೈಸ್ತರು, ಮಹಿಳೆಯರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಆ್ಯನಿಬೆಸೆಂಟ್ ಹಾಗೂ ಸೋನಿಯಾ ಗಾಂಧಿ ಸೇರಿದಂತೆ ಮಹಿಳೆಯರು ಕೂಡ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.


ಬಿಜೆಪಿ ಅವರಿಗೆ ಕೇಳ್ತೀನಿ. ನಿಮ್ಮ ಅಧ್ಯಕ್ಷರಿಗೆ ಚುನಾವಣೆ ಮಾಡಿದ್ದೀರಾ? ನಮ್ಮಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಆದರೆ ಆರ್ ಎಸ್ ಎಸ್ ಕೇವಲ ಒಂದು ಜಾತಿಗೆ ಸೇರಿದ ಸಂಘಟನೆ ಆಗಿದೆ. ಆರ್ ಎಸ್ ಎಸ್ ಗೆ ನೂರು ವರ್ಷ ಆಗ್ತಾ ಇದೆ, ಆದ್ರೆ ಕೇವಲ ಆರು ಜನರನ್ನ ಮಾತ್ರ ಸರ ಸಂಘ ಸಂಚಾಲಕರನ್ನಾಗಿ ಮಾಡಲಾಗಿದೆ. ಹೀಗಾಗಿ ಬಿಜೆಪಿ, ಖಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ನಾವು ಕಲಿಯುವ ಅಗತ್ಯವಿಲ್ಲ.


ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಈ ತ್ರಿವರ್ಣ ಧ್ವಜ ಗೌರವ ಕಾಪಾಡುವ ಜವಾಬ್ದಾರಿ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಕಾಪಾಡುವ ಜವಾಬ್ದಾರಿ ಇದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸುವ ಸವಾಲು ಇದೆ. ಈ ಹೋರಾಟದಲ್ಲಿ ಕರ್ನಾಟಕದ ಜನತೆ ಹಾಗೂ ದೇಶದ ಪ್ರತಿಯೊಬ್ಬ ಕಾಂಗ್ರೆಸ್ ಸದಸ್ಯರು ಸೇರಿದಂತೆ ನಾವೆಲ್ಲರೂ ನಿಮ್ಮ ಜತೆಯಾಗಿ ಹೆಜ್ಜೆ ಹಾಕುತ್ತೇವೆ ಎಂಬ ಭರವಸೆ ನೀಡುತ್ತೇನೆ ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ