ಬೆಂಗಳೂರು: ತಮಿಳುನಾಡಿಗೆ ನೀರು ಬಿಡಲು ನಮ್ಮ ಬಳಿಯೇ ನೀರಿಲ್ಲ ಎನ್ನುವುದನ್ನು ಕೇಂದ್ರಕ್ಕೆ ಮನವರಿಕೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಜೊತೆ ಸಭೆ ನಡೆಸಿದ ನಂತರ ಮಾತನಾಡಿದರು.


COMMERCIAL BREAK
SCROLL TO CONTINUE READING

ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿ, ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ.ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು.ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ.ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ.ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ.ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಅವರು ಹೇಳಿದರು.


ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಕೋಚ್ ಬದಲಾವಣೆ: ಹೊಸ ಕೋಚ್ ಆಗಿ ಈ ಅನುಭವಿ ಆಟಗಾರನ ನೇಮಕ


ನಾವು ಪ್ರಧಾನಿ ಅವರ ಭೇಟಿಗೆ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ.ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದರು. 


ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ.ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಆಗಿರುವುದರಿಂದ ಜಲಾಶಯಗಳ ಒಳ ಹರಿವು 11,000 ದಿಂದ 8,000 ಕ್ಯೂಸೆಕ್ ಗೆ ಇಳಿದಿದೆ.


ಇದನ್ನೂ ಓದಿ: ಚಿನ್ನ ಖರೀದಿಗೆ ಇದುವೇ ಬೆಸ್ಟ್ ಟೈಂ… 10 ಗ್ರಾಂ ಬಂಗಾರದ ದರ ಹೇಗಿದೆ ಗೊತ್ತಾ?


ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂಬುದನ್ನು ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.