ನುಡಿದಂತೆ ನಡೆಯುತ್ತಿದ್ದೇವೆ: ಸರ್ಕಾರ ಬಂದು 50 ದಿನಗಳೊಳಗೆ ಜನರಿಗೆ 3 ಗ್ಯಾರಂಟಿ ನೀಡಿದ್ದೇವೆ- ಕಾಂಗ್ರೆಸ್

ಸರ್ಕಾರ ಹಾಗೂ ಆಡಳಿತ ನಡೆಸುವವರು ಮಾತೃಹೃದಯದಿಂದ ಕೆಲಸ ಮಾಡಬೇಕು ಎನ್ನುತ್ತಾರೆ. ಸರ್ಕಾರದ ಮೇಲೆ ನಿರೀಕ್ಷೆ, ಭರವಸೆ ಇಟ್ಟು  ಬರುವ ಜನರ ನೋವಿಗೆ, ಅವರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಸರ್ಕಾರದ್ದಾಗಿರಬೇಕು ಎಂದು ಕಾಂಗ್ರೆಸ್ ಹೇಳಿದೆ.

Written by - Puttaraj K Alur | Last Updated : Jul 1, 2023, 12:51 PM IST
  • ಕೊಟ್ಟ ಭರವಸೆಯಂತೆಯೇ ನಮ್ಮ ಐದು ಗ್ಯಾರಂಟಿಗಳು ಒಂದೊಂದಾಗಿ ಜಾರಿಯಾಗುತ್ತಿವೆ
  • ಕಾಂಗ್ರೆಸ್ ಸರ್ಕಾರ ಬಂದು 50 ದಿನಗಳ ಒಳಗೆ 3 ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದೇವೆ
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದ ಕಾಂಗ್ರೆಸ್
ನುಡಿದಂತೆ ನಡೆಯುತ್ತಿದ್ದೇವೆ: ಸರ್ಕಾರ ಬಂದು 50 ದಿನಗಳೊಳಗೆ ಜನರಿಗೆ 3 ಗ್ಯಾರಂಟಿ ನೀಡಿದ್ದೇವೆ- ಕಾಂಗ್ರೆಸ್ title=
'ನುಡಿದಂತೆ ನಡೆಯುತ್ತಿದ್ದೇವೆ'

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಘೋಷಿಸಿದ್ದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂದಿನಿಂದ ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳು ಜಾರಿಯಾಗುತ್ತಿವೆ. ಈ ಹಿನ್ನೆಲೆ ನಾವು ನುಡಿದಂತೆ ನಡೆಯುತ್ತಿದ್ದೇವೆಂದು ಕಾಂಗ್ರೆಸ್ ಹೇಳಿಕೊಂಡಿದೆ.

ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ನಮ್ಮ ಐದು ಗ್ಯಾರಂಟಿಗಳು ಒಂದೊಂದಾಗಿ ಜಾರಿಯಾಗುತ್ತಿವೆ. ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಜಾರಿಯಾಗಿ, ಯಶಸ್ವಿಯಾಗಿ ಜನರನ್ನು ತಲುಪಿದೆ. ಹಲವು ಕುತಂತ್ರಗಳ ನಡುವೆಯೂ ‘ಅನ್ನಭಾಗ್ಯ’ ಯೋಜನೆಯನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಂಡಿದ್ದೇವೆ. ಇಂದಿನಿಂದ ಉಚಿತ ವಿದ್ಯುತ್ತಿನ ‘ಗೃಹಜ್ಯೋತಿ’ ಯೋಜನೆ ಜಾರಿಯಾಗಲಿದೆ. ನುಡಿದಂತೆ ನಡೆಯುತ್ತಿದ್ದೇವೆ, ಸರ್ಕಾರ ಬಂದು 50 ದಿನಗಳ ಒಳಗೆ 3 ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದೇವೆ’ ಎಂದು ಹೇಳಿದೆ.

ಇದನ್ನೂ ಓದಿ: ಇಂದಿನಿಂದ ಗೃಹಜ್ಯೋತಿ ಯೋಜನೆ ಪ್ರಾರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

ಸರ್ಕಾರಕ್ಕೆ ಜನರ ನೋವಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನವಿರಬೇಕು

‘ಸರ್ಕಾರ ಹಾಗೂ ಆಡಳಿತ ನಡೆಸುವವರು ಮಾತೃಹೃದಯದಿಂದ ಕೆಲಸ ಮಾಡಬೇಕು ಎನ್ನುತ್ತಾರೆ. ಸರ್ಕಾರದ ಮೇಲೆ ನಿರೀಕ್ಷೆ, ಭರವಸೆ ಇಟ್ಟು  ಬರುವ ಜನರ ನೋವಿಗೆ, ಅವರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಸರ್ಕಾರದ್ದಾಗಿರಬೇಕು. ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಕಳೆದ ವರ್ಷ ವಿಕೃತನೊಬ್ಬನಿಂದ ಆಸಿಡ್ ದಾಳಿಗೆ ತುತ್ತಾಗಿದ್ದ ಯುವತಿಯ ಉದ್ಯೋಗದ ಸಮಸ್ಯೆ ಗಮನಕ್ಕೆ ಬಂದ ತಕ್ಷಣವೇ ಸಿಎಂ ಸಿದ್ದರಾಮಯ್ಯನವರು ಆ ಯುವತಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ಒದಗಿಸಿ ನೆರವು ನೀಡಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬೊಮ್ಮಯಿಯವರಲ್ಲಿ ಇದೇ ಯುವತಿಯ ಸಮಸ್ಯೆಗೆ ಪರಿಹಾರ ಸಿಕ್ಕಿರಲಿಲ್ಲ. ಇದೇ ಕಾಂಗ್ರೆಸ್ ಗೂ ಬಿಜೆಪಿಗೂ ಇರುವ ವ್ಯತ್ಯಾಸ’ವೆಂದು ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ!

ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು, ಮಂತ್ರಿಮಂಡಲವೂ ರಚನೆಯಾಯ್ತು, ಸರ್ಕಾರ ಕೆಲಸ ಶುರು ಮಾಡಿಯಾಯ್ತು, ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು, 3 ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ಬಿಜೆಪಿ ಪಕ್ಷ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ!. ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ’ವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಇದನ್ನೂ ಓದಿ: 'RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು' ವಿಪಕ್ಷ ನಾಯಕ ಬೇಕಾಗಿದ್ದಾರೆ- ಕಾಂಗ್ರೆಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News