ಮೈಸೂರು : ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ.ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ.ಎದುರಾದ ಅನಾಹುತಗಳ ಪರಿಹಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.ಸ್ಥಳ ಸಮೀಕ್ಷೆ ಕೂಡಾ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅನಾಹುತಗಳಿಗೆ ಪರಿಹಾರ ಕೂಡಾ ನೀಡುತ್ತೇವೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಚನ್ನಪಟ್ಟಣ ವಿಧಾನಸಭಾ ಉಪಚುನಾಣೆಯಲ್ಲಿ ತ್ರಿಕೋನ ಸ್ಪರ್ಧೆ ನಿಶ್ಚಿತ!


ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆಯೂ ಸಿದ್ದರಾಮಯ್ಯ ಹೇಳಿದ್ದಾರೆ.ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿಕೊಂಡು ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.  


ಒಂದೆರಡು ದಿನಗಳಲ್ಲಿ ಅಭ್ಯರ್ಥಿ ಫೈನಲ್ : 
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು.ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡಾ ಪ್ರಬಲ  ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : MLC ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್‌ ರಾಜೀನಾಮೆ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.