ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು?
`ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ`
ಬೆಂಗಳೂರು : ಕರ್ನಾಟಕದ ಪ್ರದೇಶವನ್ನು ವಶಪಡಿಸಿಕೊಳ್ಳುವುದಾಗಿ ಹೇಳಿ ವಿವಾದ ಸೃಷ್ಟಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಮತ್ತೆ ಕಿಡಿ ಕಾರಿದ್ದಾರೆ.
ಇಂದು ಟ್ವೀಟ್ (Tweet) ಮಾಡಿರುವ ಎಚ್.ಡಿ. ಕುಮಾರಸ್ವಾಮಿ (HD Kumaraswamy), 'ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ' ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆ ಸರಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯಿರಿ: ಅಶ್ವಥ್ ನಾರಾಯಣ
Shiv sena) ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‌ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು' ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ - ಬೆಳಗಾವಿ ವಶಪಡಿಸಿಕೊಳ್ಳುತ್ತೇವೆ ಎಂಬ ಉದ್ಧವ್ ಠಾಕ್ರೆ ಮಾತು ಚೀನಾದ ವಿಸ್ತರಣಾವಾದದಂತಿದೆ: HDK
'ಈ ಧ್ವಜ ವಿರೋಧಿ ಹೋರಾಟವನ್ನು ರಾಜ್ಯದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ವಿರೋಧಿಸಬೇಕಾಗಿದೆ. ಕನ್ನಡದ ವಿಚಾರಕ್ಕೆ ಮಾತಾಡಲು, ಕನ್ನಡಕ್ಕೆ ಕೈ ಎತ್ತಲು ರಾಜ್ಯದ ನಾಯಕರು ರಾಜಕೀಯ ಮರೆಯಬೇಕು. ಪಕ್ಷ ನೋಡಬಾರದು, ಮಿತ್ರಪಕ್ಷವೆಂದು ಎಣಿಸಬಾರದು, ದೆಹಲಿ ಕಡೆಗೆ ನೋಡಬಾರದು. ಆಗ ಮಾತ್ರ ಇಂಥ ಆಕ್ರಮಣಕಾರಿ ಪ್ರವೃತ್ತಿಗಳನ್ನು ನಾವು ಹತ್ತಿಕ್ಕಲು ಸಾಧ್ಯ' ಎಂದಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.