ನವದೆಹಲಿ: ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಇದನ್ನೂ ಓದಿ: ಯಡಿಯೂರಪ್ಪ ಭ್ರಷ್ಟ ಜನತಾ ಪಾರ್ಟಿಯನ್ನು ಸ್ವಚ್ಛಗೊಳಿಸಲು ಪ್ರವಾಸ ಮಾಡಲಿ: ಕಾಂಗ್ರೆಸ್
ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ.ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ ಎಂದು ಹೇಳಿದರು.
ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕದ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ.ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ.
ಇದನ್ನೂ ಓದಿ: ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ: ಚುನಾವಣೆ ಆಯೋಗದ ಕ್ರಮಕ್ಕೆ ಬೊಮ್ಮಾಯಿ ಆಗ್ರಹ
ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ ಎಂದರು.
ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ.ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ.ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.