ಬೆಂಗಳೂರು: "ಪ್ರತಿನಿತ್ಯ 10,000 ಕಿಸೆಕ್ಸ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್


ಕೃಷ್ಣ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು, "ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಆದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ ನೀರು ಇಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆನಲೆಯಲ್ಲಿ ಪ್ರಾಧಿಕಾರಕ್ಕೆ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡುತ್ತೇವೆ" ಎಂದು ತಿಳಿಸಿದರು.


ಇದನ್ನೂ ಓದಿ : Savings Account: ನಿಮ್ಮ ಬಳಿಯೂ ಒಂದಕ್ಕಿಂತ ಹೆಚ್ಚು ಉಳಿತಾಯ ಖಾತೆ ಇದೆಯೇ? ಈ 4 ವಿಷಯಗಳನ್ನು ನಿರ್ಲಕ್ಷಿಸಬೇಡಿ


ಕುಮಾರಸ್ವಾಮಿಯವರು ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರಶ್ನಿಸಿದಾಗ, "ಕುಮಾರಸ್ವಾಮಿ ಅವರು ಸರ್ವ ಪಕ್ಷ ಸಭೆ ಕರೆಯುವ ಬಗ್ಗೆ ಕೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಬಗ್ಗೆ ಸರ್ವ ಪಕ್ಷಗಳ ಜೊತೆ ಚರ್ಚೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ನಾವು ಕೂಡ ಸರ್ವಪಕ್ಷ ಸಭೆ ನಡೆಸುವ ಬಗ್ಗೆ ಆಲೋಚನೆ ಮಾಡಿದ್ದೇವೆ. ಬೊಮ್ಮಾಯಿಯವರು ಕೂಡ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಅವರ ಸರ್ಕಾರ ಇದ್ದಾಗಲೂ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ನೀರು ಬಿಡಲಾಗಿತ್ತು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ನೀರು ಬಿಡಲಾಗಿತ್ತು. ಈ ಬಗ್ಗೆ ದಾಖಲೆಗಳಿವೆ. ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನಮ್ಮ ಪರಿಸ್ಥಿತಿ ಹದಗೆಟ್ಟಿದ್ದು ತಮಿಳುನಾಡಿನವರು ತಮ್ಮ ಆಗ್ರಹ ಮುಂದುವರಿಸಿದ್ದಾರೆ" ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.