ಬೆಂಗಳೂರು: ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.


COMMERCIAL BREAK
SCROLL TO CONTINUE READING

ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು.ವೇಮನರಾದಿಯಾಗಿ ಬಸವಾದಿ ಶರಣರು ಮನುಕುಲದ ಆಸ್ತಿ. ಪ್ರತೀ ಮಗುವೂ ಹುಟ್ಟುತ್ತಾ ವಿಶ್ವ ಮಾನವ. ಬೆಳೆಯುತ್ತಾ ಅಲ್ಪಮಾನವರಾಗಿ ಬಿಡುತ್ತಾರೆ ಎಂದು ಕುವೆಂಪು ಹೇಳಿರುವ ಮಾತು ಸತ್ಯ. ವೇಮನ ಅವರು ಆಕಸ್ಮಿಕವಾಗಿ ರೆಡ್ಡಿ ಸಮುದಾಯದಲ್ಲಿ ಹುಟ್ಟಿದ್ದರೂ ಅವರು ಇಡಿ ಮನುಕುಲಕ್ಕೆ ಬೇಕಾದವರಾಗಿದ್ದರು.ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು.‌ ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು.ರೆಡ್ಡಿ ಜನ ಸಂಘದ ಶಿಕ್ಷಣ ಸಂಸ್ಥೆಗೆ ಜಮೀನು ಒದಗಿಸಲು ಸರ್ಕಾರ ಸಿದ್ಧವಿದೆ. ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪುತ್ಥಳಿಯನ್ನು ವಿಧಾನಸೌಧದಲ್ಲಿ ಹಾಕಲು ಅವಕಾಶ ಕಲ್ಪಿಸಿದ್ದು ನಮ್ಮ ಅವಧಿಯಲ್ಲೇ ಎಂದು ತಿಳಿಸಿದರು.


ಇದನ್ನೂ ಓದಿ : Ayodhya: ಅಯೋಧ್ಯೆಗೆ ಹೋಗಲು ಬಯಸುವವರಿಗೆ ಗುಡ್ ನ್ಯೂಸ್.. ರೈಲ್ವೆ ಇಲಾಖೆ ಮಹತ್ವದ ನಿರ್ಧಾರ!


ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಸರ್ಕಾರವೇ ವೇಮನ ಜಯಂತಿ ಆಚರಿಸಲು ಆದೇಶಿಸಿದ್ದೆ. ನಮ್ಮ ಸರ್ಕಾರ ಎಲ್ಲಾ ಜಾತಿ ಮತ್ತು ಧರ್ಮದ ಬಡವರ ಪರವಾಗಿ ಇರುತ್ತದೆ. ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮ ವರ್ಗದವರ ಪರವಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೆ ತರುತ್ತಿದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ