ಬೆಳಗಾವಿ: ಬಜೆಟ್ ಕುರಿತ ಸಿದ್ದರಾಮಯ್ಯನವರ ಹೇಳಿಕೆಗೆ ತಮ್ಮ ಬೆಂಬಲವಿದೆ ಎಂದು  ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ಅನುಭವಿ ರಾಜಕಾರಣಿ ಅದ್ದರಿಂದ ಅವರ ಬಜೆಟ್  ಕುರಿತ ವಿಚಾರವಾಗಿ ನೀಡಿದ ಹೇಳಿಕೆಗೆ ತಮ್ಮ ಬೆಂಬಲವಿದೆ ಎಂದು ಅವರು  ತಿಳಿಸಿದರು. ಅಲ್ಲದೆ ಈ ಹಿಂದಿನ ಕಾಂಗ್ರೆಸ್ ನ ಕಾರ್ಯಕ್ರಮಗಳನ್ನು ಮುಂದುವರೆಸುವುದಾದರೆ  ಬಜೆಟ್ ಮಂಡಿಸಲಿ ಎಂದು ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. 


ಇದೇ ವೇಳೆ ಉಳಿದಿರುವ  ಖಾತೆ ಹಂಚಿಕೆ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು ಉತ್ತರ ಕರ್ನಾಟಕದ  ಬೆಳಗಾವಿ ಬಿಜಾಪುರ್ ಹಾಗೂ ಗದಗ  ಜಿಲ್ಲೆಗಳಿಗೆ ಸಚಿವ ಸ್ಥಾನದ ಪ್ರಾತಿನಿಧ್ಯ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ನ್ನು ಒತ್ತಾಯಿಸಲಿದ್ದೇವೆ ಎಂದು ತಿಳಿಸಿದರು.