"ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ"

ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿರೋದು ಹೆಮ್ಮೆಯ ವಿಚಾರ. ಇದು ರಾಜ್ಯ ಕಾಂಗ್ರೆಸ್‌ ಗೆ ಶಕ್ತಿಯನ್ನು ತಂದುಕೊಟ್ಟಿದೆ. 2023ರಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ ಎಂಬುದನ್ನು ಹೇಳಲು ಬಯಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ. 

Written by - Zee Kannada News Desk | Last Updated : Nov 6, 2022, 10:32 PM IST
  • ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಇಂದು ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ.
  • ಅವರ ಆಗಮನದಿಂದ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣ ಇದೆ.
  • ಎಸ್‌, ನಿಜಲಿಂಗಪ್ಪನವರ ನಂತರ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರೋದು ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರಿಗೆ ಹೆಮ್ಮೆ.
"ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ" title=
Photo Courtsey: Twitter

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿರೋದು ಹೆಮ್ಮೆಯ ವಿಚಾರ. ಇದು ರಾಜ್ಯ ಕಾಂಗ್ರೆಸ್‌ ಗೆ ಶಕ್ತಿಯನ್ನು ತಂದುಕೊಟ್ಟಿದೆ. 2023ರಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ ಎಂಬುದನ್ನು ಹೇಳಲು ಬಯಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ. 

ಸರ್ವೋದಯ ಸಮಾವೇಶದಲ್ಲಿನ ಸಿದ್ಧರಾಮಯ್ಯನವರ ಭಾಷಣದ ಮುಖ್ಯಾಂಶಗಳು 

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಇಂದು ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ. ಅವರ ಆಗಮನದಿಂದ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣ ಇದೆ. ಎಸ್‌, ನಿಜಲಿಂಗಪ್ಪನವರ ನಂತರ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರೋದು ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರಿಗೆ ಹೆಮ್ಮೆ. ಅಧ್ಯಕ್ಷರಾಗಿ ಖರ್ಗೆಯವರು ಕೆಲವು ಸಲಹೆಗಳನ್ನು ನೀಡಿ, ಅದರ ಜೊತೆಗೆ ತಮಗೆ ಸಂತೋಷ ಆಗಬೇಕಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ, ಕಾಂಗ್ರೆಸ್ ಸರ್ಕಾರ ತರಬೇಕು ಎಂದು ಹೇಳಿದ್ದಾರೆ. ನನ್ನ ಪ್ರಕಾರ ಬಿಜೆಪಿಯ ಭ್ರಷ್ಟ, ದುರಾಡಳಿತದ ಸರ್ಕಾರವನ್ನು ಕಿತ್ತುಹಾಕಿ, ಅಭಿವೃದ್ಧಿ ಪರವಾದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ರಾಜ್ಯದ ಜನ ಈಗಾಗಲೇ ಸಂಕಲ್ಪ ಮಾಡಿದ್ದಾರೆ. 

ಮುಂದಿನ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ಬರುತ್ತಿದೆ, ರಾಜ್ಯದ ಜನ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ ಕಾಂಗ್ರೆಸ್‌ ಸರ್ಕಾರವನ್ನು ರಚನೆ ಮಾಡಿ, ಆ ಮೂಲಕ ಖರ್ಗೆಯವರಿಗೆ ಅಭಿನಂದನೆ ಸಲ್ಲಿಸುತ್ತಾರೆ, ಇದರಲ್ಲಿ ಯಾವ ಸಂಶಯವೂ ಇಲ್ಲ ಎಂಬುದು ನನ್ನ ಅಭಿಪ್ರಾಯ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರಬಹುದು ಆದರೆ ನಮಗೆ ಇರುವ ಸವಾಲು ಕರ್ನಾಟಕದಲ್ಲಿ ಕೋಮುವಾದಿ, ಬಡವರ ವಿರೋಧಿ, ರೈತರ ಮತ್ತು ಅಲ್ಪಸಂಖ್ಯಾತರ ವಿರೋಧಿ ಸರ್ಕಾರವನ್ನು ಕಿತ್ತುಹಾಕಬೇಕು ಎಂಬುದು. ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಕಳೆದಿರುವ ಬಿಜೆಪಿ ಸರ್ಕಾರ ರಾಜ್ಯದ ಬಡವರು, ಯುವಕರು, ರೈತರು, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಿಲ್ಲ. ಈ ಸರ್ಕಾರವನ್ನು 40% ಕಮಿಷನ್‌ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ದೂರಿದ್ದಾರೆ. ನಮ್ಮನ್ನು ಈ 40% ಕಮಿಷನ್‌ ಹಾವಳಿಯಿಂದ ರಕ್ಷಿಸಿ ಎಂದು ಮನವಿ ಮಾಡಿದ್ದಾರೆ. ಸುಮಾರು 27,000 ಕೋಟಿ ರೂಪಾಯಿ ನಮಗೆ ಬರಬೇಕಾದ ಬಾಕಿ ಬಿಲ್‌ ಇದೆ, ಇದಕ್ಕೆ 40% ಕಮಿಷನ್‌ ಕೇಳುತ್ತಿದ್ದಾರೆ. ಇದನ್ನು ಕೊಡಲು ನಮ್ಮಿಂದ ಆಗಲ್ಲ, ನೀವೇ ನಮಗೆ ರಕ್ಷಣೆ ಕೊಡಬೇಕು ಎಂದಿದ್ದಾರೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ಕ್ರಮ ಕೈಗೊಂಡಿಲ್ಲ. 

ಸಂತೋಷ್‌ ಪಾಟೀಲ್‌ ಎಂಬ ಗುತ್ತಿಗೆದಾರ ತನ್ನ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್‌ ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮೊನ್ನೆಮೊನ್ನೆ ನಂದೀಶ್‌ ಎಂಬ ಇನ್ಸ್‌‌ಪೆಕ್ಟರ್‌ ಒತ್ತಡದಿಂದ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಬಸವರಾಜ್‌ ಎಂಬ ಗುತ್ತಿಗೆದಾರ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣ ಕೊಡಿ ಎಂದು ಕೇಳಿಕೊಂಡಿದ್ದಾರೆ. ಇಂಥಾ ಸರ್ಕಾರ ರಾಜ್ಯದ ಇತಿಹಾಸದಲ್ಲಿ ಯಾವತ್ತೂ ಬಂದಿರಲಿಲ್ಲ. ಪೊಲೀಸ್ ಅಧಿಕಾರಿ ನಂದೀಶ್‌ ಎಂಬುವವರು 70-80 ಲಕ್ಷ ಲಂಚ ಕೊಟ್ಟು ಕೆ.ಆರ್‌ ಪುರಂ ಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ. ಇದನ್ನು ಸಚಿವ ಎಂಟಿಬಿ ನಾಗರಾಜ್‌ ಅವರೇ ಹೇಳಿ, ಕೊನೆಗೆ ತಾನು ಈ ರೀತಿ ಹೇಳಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ಮುಖ್ಯಮಂತ್ರಿ ಮತ್ತು ಗೃಹಸಚಿವರೇ ಕಾರಣ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾನ ಮರ್ಯಾದಿ ಇದ್ದಿದ್ದರೆ ಎಂಟಿಬಿ ನಾಗರಾಜ್‌ ಅವರು ಹೇಳಿಕೆ ನೀಡಿದ ತಕ್ಷಣ ರಾಜೀನಾಮೆ ನೀಡಿ ಮನೆಗೆ ಹೋಗಬೇಕಿತ್ತು. ಬಿಜೆಪಿಯವರು ಭಂಡರು. ಇಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಅಭಿವೃದ್ಧಿ ಶೂನ್ಯ ಆಡಳಿತ ಇದೆ. ಇಂಥಾ ಸರ್ಕಾರವನ್ನು ಕಿತ್ತುಹಾಕಲೇ ಬೇಕು. 

ರಾಜ್ಯದಲ್ಲಿ ಬಡವರು, ದಲಿತರು, ಅಲ್ಪಸಂಖ್ಯಾತರು ನೆಮ್ಮದಿಯಾಗಿ ಬದುಕಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷ ರಾಜಕಾರಣ, ನಿರುದ್ಯೋಗ, ರೈತರ ಸಮಸ್ಯೆಗಳು ಇವುಗಳಿಗೆ ಪರಿಹಾರ ನೀಡುವ ಕೆಲಸ ಇಂದು ನಡೆಯುತ್ತಿಲ್ಲ. ಇದೇ ಕಾರಣಕ್ಕೆ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದಾರೆ. ಇದರ ಮೂಲಕ ಜನರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಭಾರತ ಐಕ್ಯತಾ ಯಾತ್ರೆ ಇಂದ ರಾಜ್ಯದ ಕಾಂಗ್ರೆಸ್‌ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬರಲಿದೆ.

ಖರ್ಗೆಯವರು ರಾಜ್ಯದಲ್ಲಿ ಸುದೀರ್ಘ ಕಾಲ ರಾಜಕಾರಣ ಮಾಡಿದವರು, ಆಡಳಿತ ನಡೆಸಿದ ಅನುಭವ ಇರುವವರು. ಹಲವು ಇಲಾಖೆಗಳಲ್ಲಿ ಅಭಿವೃದ್ಧಿಪರ ಚಿಂತನೆಗಳಿಂದ ಅವರು ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ. ಖರ್ಗೆಯವರಿಗೆ ದ್ವೇಷದ, ಶ್ರೀಮಂತರ ಪರವಾದ ರಾಜಕಾರಣ ಮಾಡಿ ಗೊತ್ತಿಲ್ಲ. ಬಡವರ ಪರವಾಗಿ, ಬುದ್ಧ, ಬಸವ, ಅಂಬೇಡ್ಕರ್‌ ಅವರ ಸಿದ್ದಾಂತಗಳಿಗೆ ಬದ್ಧರಾಗಿ, ತಾವು ನಂಬಿದ ಸಿದ್ಧಾಂತದಲ್ಲಿ ಯಾವ ರಾಜಿಯಿಲ್ಲದೆ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಖರ್ಗೆಯವರು ಒಬ್ಬ ಸ್ವಾಭಿಮಾನಿ ರಾಜಕಾರಣಿ. ನಾನು ಕಂಡಂತೆ ಕರ್ನಾಟಕದಲ್ಲಿ ಸಮಚಿತ್ತವಿರುವ, ಮೌಢ್ಯವಿರೋಧಿ, ಪ್ರಗತಿಪರ ರಾಜಕಾರಣಿ ಇದ್ದರೆ ಅದು ಮಲ್ಲಿಕಾರ್ಜುನ ಖರ್ಗೆಯವರು. ಇಷ್ಟು ವರ್ಷಗಳ ಕಾಲ ಲೋಕಸಭೆ, ರಾಜ್ಯಸಭೆಯಲ್ಲಿ ಸೇವೆ ಮಾಡಿ, ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿರೋದು ಹೆಮ್ಮೆಯ ವಿಚಾರ. ಇದು ರಾಜ್ಯ ಕಾಂಗ್ರೆಸ್‌ ಗೆ ಶಕ್ತಿಯನ್ನು ತಂದುಕೊಟ್ಟಿದೆ. 2023ರಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಖರ್ಗೆಯವರು ನೀಡಿರುವ ಎಚ್ಚರಿಕೆ ಮಾತುಗಳಂತೆ ನಾವು ನಡೆದುಕೊಳ್ತೇವೆ ಎಂಬುದನ್ನು ಹೇಳಲು ಬಯಸುತ್ತೇನೆ.

ಎಐಸಿಸಿ ಚುನಾವಣೆಯಲ್ಲಿ ಖರ್ಗೆಯವರು ಬಹಳ ದೊಡ್ಡ ಬಹುಮತದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯವರು ಕಾಂಗ್ರೆಸ್‌ ನಲ್ಲಿ ವಂಶಪಾರಂಪರ್ಯ ಆಡಳಿತ ಇದೆ, ಬೇರೆಯವರಿಗೆ ಅವಕಾಶ ಇಲ್ಲ ಎಂದು ಮಾತನಾಡುತ್ತಿದ್ದರು ಆದರೆ ಇಂದು ಖರ್ಗೆಯವರು ಅಧ್ಯಕ್ಷರಾಗಿ ಅಂಥಾ ಟೀಕೆಗಳಿಗೆ ಸರಿಯಾದ ಉತ್ತರ ನೀಡಿದ್ದಾರೆ. ಕಾಂಗ್ರೆಸ್‌ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬುದು ಇದರಿಂದ ಸಾಬೀತಾಗಿದೆ. 
ನಾಡಿನ ಜನತೆ, ಕಾಂಗ್ರೆಸ್‌ ಪಕ್ಷದ ಪರವಾಗಿ ಹಾಗೂ ವೈಯಕ್ತಿವಾಗಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News