"ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ"

  ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Written by - Manjunath N | Last Updated : Jun 7, 2023, 11:41 PM IST
  • ಜಾತಿವಾರು ಸಮೀಕ್ಷೆಯಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ
  • ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ
  • ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಲ್ಲ
"ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ" title=

ಬೆಂಗಳೂರು:  ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು, ಸುಮಾರು 80ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಪ್ರತಿನಿಧಿಗಳು ಹಾಗೂ 60ಕ್ಕೂ ಹೆಚ್ಚು ದಲಿತ ಜಾತಿ-ಸಮುದಾಯಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿ, ಕೆಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದರು.ಈ ವೇಳೆ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ ನಾಯಕರಿಗೆ ಗೊಂದಲ ನಿವಾರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ನಡೆಸಿದ್ದ ಜಾತಿವಾರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸುತ್ತೇವೆ ಎಂದು ಹೇಳಿದರು

.

ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಆದ್ಯತಾ ಕ್ರಮಗಳು ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುತ್ತದೆ.ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ.ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು.ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ.ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News