Basavaraja Bommai : 'ಬಿಜೆಪಿ ಪರವಾದ ಉತ್ಸಾಹ ; 2023 ರಲ್ಲಿ ನಾವೇ ಅಧಿಕಾರಕ್ಕೆ'

ಭಾರತೀಯ ಜನತಾ ಪಕ್ಷ ಮತ್ತೊಮ್ಮೆ  2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ, ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Written by - Prashobh Devanahalli | Last Updated : Oct 11, 2022, 02:55 PM IST
  • ಬಿಜೆಪಿ ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ
  • ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು
  • ಭಾರತ್ ಜೋಡೋ ಯಾತ್ರೆಗೆ ಮಹತ್ವವಿಲ್ಲ
Basavaraja Bommai : 'ಬಿಜೆಪಿ ಪರವಾದ ಉತ್ಸಾಹ ; 2023 ರಲ್ಲಿ ನಾವೇ ಅಧಿಕಾರಕ್ಕೆ' title=

ಬೆಂಗಳೂರು : ಭಾರತೀಯ ಜನತಾ ಪಕ್ಷ ಮತ್ತೊಮ್ಮೆ  2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ, ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜನಸಂಕಲ್ಪ ಯಾತ್ರೆಗೆ ತೆರಳುವ ಮುನ್ನ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಭಾರತೀಯ ಜನತಾ ಪಕ್ಷ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡಿ ಬಂದಿದೆ.ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ  ಜನಸಂಕಲ್ಪ ಯಾತ್ರೆ ಇಂದು ಪ್ರಾರಂಭವಾಗುತ್ತಿದೆ ಎಂದರು.

ಇದನ್ನೂ ಓದಿ : 

ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಿ 2023 ರ  ಚುನಾವಣೆಯಲ್ಲಿ ಮತ್ತೊಮ್ಮೆ  ಭಾ.ಜ.ಪ ಅಧಿಕಾರಕ್ಕೆ  ಬರಬೇಕೆಂಬ ಸಂಕಲ್ಪ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಬಿ.ಜೆ.ಪಿ.ಸರ್ಕಾರ ಮಾಡಿರುವ ಕಾರ್ಯಕ್ರಮಗಳು, ನೀತಿಗಳು ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಂದಾಗಿ  ಒಂದೊಂದು ಕ್ಷೇತ್ರದ ಸಾವಿರಾರು ಜನರಿಗೆ ಅನುಕೂಲವಾಗಿದೆ. ಅದನ್ನು ಜನಕ್ಕೆ ತಿಳಿಹೇಳಿ ಮುಂಬರುವ ಕಾರ್ಯಕ್ರಮಗಳನ್ನು ಯಾವ ವರ್ಗಗಳಿಗೆ ರೂಪಿಸಿದೆ,  ಯಾವ ರೀತಿ ಲಾಭಪಡೆಯಬೇಕೆಂಬ ತೀರ್ಮಾನಗಳನ್ನು ಜನರಿಗೆ ತಿಳಿಸಲಾಗುವುದು.  

ಭಾರತ್ ಜೋಡೋ ಯಾತ್ರೆಗೆ ಮಹತ್ವವಿಲ್ಲ:

ಭಾರತ್ ಜೋಡೋ ಯಾತ್ರೆ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಜೋಡೋ ಯಾತ್ರೆ ಯಾರನ್ನು ಜೋಡಿಸುತ್ತಿದೆ, ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ತಿಳಿದಿದೆ. ಅದಕ್ಕೆ ಯಾವ ಮಹತ್ವವೂ ಉಳಿದಿಲ್ಲ. ನಮ್ಮ ಕೆಲಸ, ನಮ್ಮ ಕಾರ್ಯಕ್ರಮ ಗಳನ್ನು ಜನರಿಗೆ ತಿಳಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕೂ ಜನಸಂಕಲ್ಪ ಯಾತ್ರೆಗೂ ಸಂಬಂಧವಿಲ್ಲ  ಎಂದರು.

ಇದನ್ನೂ ಓದಿ : 

ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News