ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸಮೀಕ್ಷೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Written by - Prashobh Devanahalli | Edited by - Manjunath N | Last Updated : Feb 14, 2024, 07:56 PM IST
  • ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ
  • ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ
  • ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು
ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸಮೀಕ್ಷೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು:

“ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ.”

ಇದನ್ನೂ ಓದಿ: ಪೋಷಕರ ನಿರ್ಲಕ್ಷ್ಯದಿಂದ ಹೆಚ್ಚಾಗ್ತಿದ್ಯಾ ಮಿಸ್ಸಿಂಗ್ ಪ್ರಕರಣ?

ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, “ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ” ಎಂದರು.

ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂದು ಕೇಳಿದಾಗ, “ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

ಎಐಸಿಸಿಗೆ ಕಳಿಸಲಾಗಿರುವ ಪಟ್ಟಿ ಬಗ್ಗೆ ಗೊಂದಲವಿದೆಯೇ ಎಂದು ಕೇಳಿದಾಗ, “ಇದೆಲ್ಲವೂ ಸುಳ್ಳು, ನಾವು ಎಐಸಿಸಿಗೆ ಯಾವುದೇ ಪಟ್ಟಿ ನೀಡಿಲ್ಲ. ಮುಖ್ಯಮಂತ್ರಿಗಳಿಗೆ ವಿವಿಧ ವರದಿಗಳು, ಅಭಿಪ್ರಾಯಗಳ ಕುರಿತ ಅಧಿಕೃತ ಪಟ್ಟಿಯನ್ನು ಇವತ್ತಷ್ಟೇ ನೀಡಿದ್ದೇನೆ. ನಾವು ನಮ್ಮ ಪಟ್ಟಿಯನ್ನು ಗೌಪ್ಯವಾಗಿಡಬೇಕು, ಆ ಕೆಲಸ ಮಾಡುತ್ತೇವೆ” ಎಂದರು.

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ!

ಸಚಿವರ ಸ್ಪರ್ಧೆ ಬಗ್ಗೆ ಕೇಳಿದಾಗ, “ರಾಜಕೀಯದಲ್ಲಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಎಲ್ಲರಿಗೂ ಅವಕಾಶವಿರುತ್ತದೆ. ಪಕ್ಷ ಗೆಲ್ಲುವುದು ಮುಖ್ಯ "ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News