ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳುತ್ತಿವೆ, ಮಕ್ಕಳ ಶಿಕ್ಷಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.


COMMERCIAL BREAK
SCROLL TO CONTINUE READING

‘ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಎಲ್ಲಾ ಅವಾಂತರಗಳನ್ನೂ ನಾವು ಸರಿಪಡಿಸುತ್ತೇವೆ. ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಹಂಪಿ ಕನ್ನಡ ವಿವಿಯಲ್ಲಿ ಪಿಎಚ್ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್ 


‘ಬೇಸಿಗೆ ರಜೆ ಮುಗಿದು ಮತ್ತೊಮ್ಮೆ ಶಾಲೆಗೆ ಸಜ್ಜಾಗಿರುವ ನಾಡಿನ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯನವರು ಪತ್ರ ಬರೆದಿದ್ದಾರೆ. ನಾಡಿನ ಮಕ್ಕಳು ಶಿಕ್ಷಣದಿಂದ ದೂರಾಗದೆ, ಶ್ರದ್ಧೆ-ಪ್ರೀತಿಯಿಂದ ಶಿಕ್ಷಣ ಪಡೆಯಬೇಕೆಂಬುದು ನಮ್ಮ ಆಶಯ, ಆ ನಿಟ್ಟಿನಲ್ಲಿ ಯಾವುದೇ ತೊಂದರೆಯಾಗದಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬಿಸಿಯೂಟ, ಸಮವಸ್ತ್ರ, ಶೂ, ಪಠ್ಯಪುಸ್ತಕಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದು ಕಾಂಗ್ರೆಸ್ ಹೇಳಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಮಾಡಿದ್ದ ಪಠ್ಯ ಪರಿಷ್ಕರಣೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಲೋಪವನ್ನು ಸರಿಪಡಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.


NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ


ಮಾಜಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮತ್ತು ಅವರ ತಂಡದ ಸದಸ್ಯರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು. ಇತಿಹಾಸ ಹಾಗೂ ಕನ್ನಡ ಪುಸ್ತಕಗಳ ಸರಬರಾಜು ಸ್ಥಗಿತ ಮಾಡಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಒತ್ತಾಯಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.