ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ(MES) ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಗುಡುಗಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿರುವ ಹಾಗೂ ಬೆಳಗಾವಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ(Sangolli Rayanna) ಪ್ರತಿಮೆ ಧ್ವಂಸ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

‘ಈ ಹಿಂದೆ ಕಾಟಾಚಾರಕ್ಕೆ ಎನ್ನುವಂತೆ ಕೆಲವರನ್ನು ಬಂಧಿಸಿ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ನಾವು ಪ್ರಮುಖರನ್ನೇ ಬಂಧಿಸಿದ್ದೇವೆ. ಹಿಂದೆಲ್ಲ ಈ ಕೆಲಸ ಆಗಿರಲಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರು ಯಾರೇ ಇರಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಅಂತಾ ಬೊಮ್ಮಾಯಿ ಹೇಳಿದ್ದಾರೆ.


ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ: ನಟಿ ಹರಿಪ್ರಿಯಾ


‘ರಾಜ್ಯದಲ್ಲಿ ಪುಂಡಾಟಿಕೆ(MES Ban) ಮಾಡಿದ ಪ್ರಮುಖರನ್ನು ಬಂಧಿಸಲಾಗಿದೆ. ನಮ್ಮ ಗೃಹ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಅಲ್ಲಿರುವ ಕನ್ನಡಿಗರು, ಆಸ್ತಿ, ಸರ್ಕಾರಿ ವಾಹನಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪುಂಡಾಟಿಕೆ ವಿರುದ್ಧ ನಿರ್ಣಾಯಕ ಕ್ರಮ ಖಚಿತ. ಇಂತಹ ಚಟುವಟಿಕೆಗಳನ್ನು ಮುಂದುವರಿಸಲು ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾರಾದರೂ ಕೈಗೆತ್ತಿಕೊಂಡರೆ ಅಂತವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಅಂತಾ ಎಚ್ಚರಿಕೆ ನೀಡಿದ್ದಾರೆ.


ಬೆಂಗಳೂರಿನ ಭಾಷ್ಯಂ ವೃತ್ತದ ಸ್ಯಾಂಕಿ ಕೆರೆ ಬಳಿ ಇರುವ ಛತ್ರಪತಿ ಶಿವಾಜಿ ಪ್ರತಿಮೆ(Shivaji statue)ಗೆ ಮಸಿ ಬಳಿದು ಕರ್ನಾಟಕ, ಮಹಾರಾಷ್ಟ್ರ ನಡುವಣ ಉದ್ವಿಗ್ನ ಸ್ಥಿತಿಗೆ ಕಾರಣರಾಗಿದ್ದ 7 ಮಂದಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಅತ್ತ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದ ಹಾಗೂ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದ ಅನೇಕರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ: ಎಚ್​ಡಿಕೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.