ಬಿಜೆಪಿ ಮುಖಂಡರು ಸತ್ತರೆ 1 ಕೋಟಿ ರೂ. ಪರಿಹಾರ ಕೊಡ್ತೀವಿ: ಕಾಂಗ್ರೆಸ್ ಶಾಸಕ
ಪ್ರಧಾನಿ ಮೋದಿ ಸೇರಿ ಕೇಂದ್ರದ ಮಂತ್ರಿಗಳು, ಬಿಜೆಪಿ ಮುಖಂಡರು ರೈತರ ಸಮಸ್ಯೆಗಳನ್ನು ಕೇಳುವ ಮನಸ್ಸು ಮಾಡುತ್ತಿಲ್ಲ. ಅನ್ನದಾತರ ಪರವಾಗಿದ್ದೇವೆ ಎಂದು ಬಿಜೆಪಿ ಸರ್ಕಾರ ರೈತರ ಬೆನ್ನೆಲುಬನ್ನೇ ಮುರಿದುಹಾಕಿದೆ ಅಂತಾ ಕಿಡಿಕಾರಿದ್ದಾರೆ.
ಬೆಂಗಳೂರು: ಬಿಜೆಪಿ ಮುಖಂಡರು ಸತ್ತರೆ 1 ಕೋಟಿ ರೂ. ಪರಿಹಾರ ಕೊಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ(Amaregouda Bayyapur) ಹೇಳಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಮಾತನಾಡಿರುವ ಅವರು, ಉತ್ತರಪ್ರದೇಶದ ಲಖೀಮ್‌ಪುರ್‌ನಲ್ಲಿ ನಡೆದಿರುವ ಹಿಂಸಾಚಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ (Uttara Pradesh)ದಲ್ಲಿ ರೈತರ ಹತ್ಯೆ ಖಂಡಿಸಿ ಕುಷ್ಟಗಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅಮರೇಗೌಡ ಬಯ್ಯಾಪುರ, 'ಮೃತ ರೈತರಿಗೆ ಸರ್ಕಾರದಿಂದ ಕೇವಲ 45 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯ ಮುಖಂಡರು ಯಾರಾದರೂ ಸತ್ತರೆ ನಾವು 1 ಕೋಟಿ ರೂ. ಪರಿಹಾರ ಕೊಡುತ್ತೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ‘ಅತಿಥಿ ಸಿಎಂ’ನಂತಾಗಿದ್ದಾರೆ: ಕಾಂಗ್ರೆಸ್ ಟೀಕೆ
ಸಂಸದರ ಮಗ ಕಾರು ಹಾಯಿಸಿ ಅಮಾಯಕ ರೈತರನ್ನು ಸಾಯಿಸಿದ್ದರೂ ಬಿಜೆಪಿಯ ಯಾವೊಬ್ಬ ಮುಖಂಡರೂ ಈ ಬಗ್ಗೆ ಮಾತನಾಡಿಲ್ಲ. ಘಟನೆ(Lakhimpur Kheri violence)ಯಲ್ಲಿ ಮೃತಪಟ್ಟವರಿಗೆ ಪರಿಹಾರವೆಂದು ಸರ್ಕಾರದಿಂದ ಕೇವಲ 45 ಲಕ್ಷ ರೂ. ಕೊಟ್ಟಿದ್ದಾರೆ. ಬಿಜೆಪಿ ಈ ದೇಶದಿಂದ ತೊಲಗಬೇಕು. ಅಲ್ಲಿವರೆಗೂ ನಮ್ಮ ಹೋರಾಟ ನಡೆಯುತ್ತದೆ. ಉತ್ತರ ಪ್ರದೇಶದ ಬಿಜೆಪಿ ಚೇಲಾಗಳಾದ ಪೊಲೀಸರು ನಮ್ಮ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಕೂಡಿ ಹಾಕಿದ್ದಾರೆ. ಪೊಲೀಸರು ಅವರ ಕೈ ಮೈ ಮುಟ್ಟಿ ಬಿಜೆಪಿ ಚೇಲಾಗಳಂತೆ ವರ್ತಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ(Farm Law)ಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಳೆದ 11 ತಿಂಗಳುಗಳಿಂದ ಉತ್ತಪ್ರದೇಶ, ಹರಿಯಾಣ, ಚಂಡಿಘಡ ಭಾಗದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ತಮಗೆ ನ್ಯಾಯವನ್ನು ನೀಡಬೇಕೆಂದು ಒತ್ತಾಯಿಸಿ ನಿರಂತರವಾಗಿ ರಸ್ತೆಗಳಲ್ಲಿ ಪ್ರತಿಭಟಿಸುತ್ತಿರುವ ರೈತರ ಧ್ವನಿಯನ್ನು ಆಲಿಸಲು ಬಿಜೆಪಿ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮೋದಿ ಸೇರಿದಂತೆ ಕೇಂದ್ರದ ಮಂತ್ರಿಗಳು, ಬಿಜೆಪಿ ಮುಖಂಡರು ಯಾರೋಬ್ಬರೂ ರೈತರ ಸಮಸ್ಯೆಗಳನ್ನು ಕೇಳುವ ಮನಸ್ಸು ಮಾಡುತ್ತಿಲ್ಲ. ಅನ್ನದಾತರ ಪರವಾಗಿದ್ದೇವೆ ಎಂದು ಬಿಜೆಪಿ ಸರ್ಕಾರ ರೈತರ ಬೆನ್ನೆಲುಬನ್ನೇ ಮುರಿದುಹಾಕಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು ಬೀದಿಗೆ ಬಂದಿದ್ದರೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳನ್ನು ಆಲಿಸುವಲ್ಲಿ ವಿಫಲವಾಗಿವೆ. ಒಂದು ಕಡೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗುತ್ತಿದೆ, ಮತ್ತೊಂದೆಡೆ ರೈತರಿಗೆ ಬೇಕಾದ ಬೀಜ, ಗೊಬ್ಬರದ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಬಿಜೆಪಿ ಸರ್ಕಾರ(BJP Govt.) ರೈತಪರವಾದ ಒಂದೇ ಒಂದು ಯೋಜನೆಯನ್ನೂ ಕೊಟ್ಟಿಲ್ಲ. ಬಿಜೆಪಿ ನಾಯಕರಿಂದ ಉತ್ತಮ ಆಡಳಿತ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ದೇಶವನ್ನು ಲೂಟಿ ಮಾಡಿ ಅಂಬಾನಿ-ಅದಾನಿಗೆ ಮಾರಾಟ ಮಾಡಲಾಗುತ್ತಿದೆ ಅಂತಾ ಕಿಡಿಕಾರಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.