`ಇನ್ನಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡುತ್ತೇವೆ`
ಗ್ಯಾರಂಟಿ ಯೋಜನೆಗಳು ದೇಶದ ಇನ್ಯಾವ ರಾಜ್ಯಗಳಲ್ಲೂ ಜಾರಿಯಾಗಿಲ್ಲ. ಹಾಗಾಗಿ ಇದು ಕರ್ನಾಟಕದ ಮಾದರಿಯಾಗಿದೆ. ಇನ್ನಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ
ಮೈಸೂರು: ಗ್ಯಾರಂಟಿ ಯೋಜನೆಗಳು ದೇಶದ ಇನ್ಯಾವ ರಾಜ್ಯಗಳಲ್ಲೂ ಜಾರಿಯಾಗಿಲ್ಲ. ಹಾಗಾಗಿ ಇದು ಕರ್ನಾಟಕದ ಮಾದರಿಯಾಗಿದೆ. ಇನ್ನಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇಡೀ ದೇಶದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು, ಈ ಅಲೆ ಪ್ರಾರಂಭವಾಗಿದ್ದು ನಮ್ಮ ನಾಯಕರಾದ ಶ್ರೀ Rahul Gandhi ಅವರ ಭಾರತ್ ಜೋಡೋ ಯಾತ್ರೆಯ ಮೂಲಕ ಎಂದರೆ ತಪ್ಪಾಗಲಾರದು.
ಇದನ್ನೂ ಓದಿ : 200 ರೂಪಾಯಿ ಅಲ್ಲ ಗ್ಯಾಸ್ ಸಿಲಿಂಡರ್ ಮೇಲೆ 400 ರೂಪಾಯಿ ದರ ಕಡಿತ ! ಯಾರಿಗೆ ಈ ಲಾಭ ?
ಇಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 100 ದಿನಗಳಾಗಿದ್ದು ಇಷ್ಟು ಕಡಿಮೆ ಸಮಯದಲ್ಲಿ ನಾಲ್ಕು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಬೆಲೆಯೇರಿಕೆಯಿಂದ ನಲುಗಿರುವ ಜನಸಾಮಾನ್ಯರ ಮೇಲಿನ ಹೊರೆ ಇಳಿಸಲು ಕಾಂಗ್ರೆಸ್ ಸರ್ಕಾರ ಮಹತ್ವದ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ.
ಇದನ್ನೂ ಓದಿ : ಡಿಎ ಹೆಚ್ಚಳಕ್ಕೂ ಹೊಸ ಫಾರ್ಮುಲಾ! ಸರ್ಕಾರಿ ಉದ್ಯೋಗಿಗಳಿಗೆ ಬಂಪರ್ ಸುದ್ದಿ!
ಈಗಾಗಲೇ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆಯ ಮೂಲಕ 200 ಯೂನಿಟ್‌ವರೆಗೂ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಅನ್ನಭಾಗ್ಯದ ಮೂಲಕ ಬಡ ಕುಟುಂಬದ ಪ್ರತೀ ಸದಸ್ಯರೂ ತಲಾ 10 ಕೆಜಿ ಅಕ್ಕಿ ಪಡೆಯುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂಲಕ ಮನೆಯ ಯಜಮಾನಿಯರು ಮಾಸಿಕ 2ಸಾವಿರ ರೂ. ಪಡೆಯಲಿದ್ದಾರೆ ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ