ಸನ್ನಿ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲವೆಂದ ಗೃಹ ಸಚಿವರು

     

Last Updated : Dec 15, 2017, 07:07 PM IST
ಸನ್ನಿ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲವೆಂದ ಗೃಹ ಸಚಿವರು title=

ಬೆಂಗಳೂರು: ನೂತನ ವರ್ಷದ ಪ್ರಯುಕ್ತ ಬೆಂಗಳೂರಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಇಂದು ಇಲ್ಲಿ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಈಗಾಗಲೇ ಪೋಲಿಸ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಕನ್ನಡ ಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ  ಸರ್ಕಾರ ಈ ಕಾರ್ಯಕ್ರಮವನ್ನು ರದ್ದು ಗೊಳಿಸಬೇಕೆಂದು ಆಯೋಜಕರಿಗೆ ಸೂಚಿಸಿದೆ. ಇಲ್ಲಿ ಹಲವಾರು ಕಲಾವಿದರಿದ್ದಾರೆ ಅವರನ್ನು ಬೇಕಾದರೆ ಕರೆಸಿ ಕಾರ್ಯಕರ್ಮ ಮಾಡಿ  ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು  ಗೃಹಸಚಿವರು ಆಯೋಜಕರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. 

Trending News