ಬೆಂಗಳೂರು: ಪೆಟ್ರೋಲ್ ನ್ನು ಜಿಎಸ್ಟಿಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರವನ್ನು ಜೆಡಿಎಸ್ ಪಕ್ಷವು ವಿರೋಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದೇ ವೇಳೆ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ತರಾಟೆಗೆ ತೆಗೆದುಕೊಂಡು ಅವರು 'ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು GST ಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ.ಪೆಟ್ರೋಲ್‌ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ ಉದ್ದೇಶವಲ್ಲ, ಅದನ್ನು GST ಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ ಎಂದು ಕುಮಾರಸ್ವಾಮಿ( H D Kumaraswamy) ಕಿಡಿ ಕಾರಿದರು.


ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ ಲೋಕಾರ್ಪಣೆ


ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು ' ಕೇಂದ್ರದಲ್ಲಿ ಅಧಿಕಾರದ ಸುತ್ತವೇ ರಾಜಕಾರಣ ಮಾಡುವುದು ರಾಷ್ಟ್ರೀಯ ಪಕ್ಷಗಳ ಅಜೆಂಡಾಆಗಿರುತ್ತದೆ.ಅವುಗಳಿಗೆ ಯಾವುದೇ ರೀತಿಯ ರಾಜ್ಯಗಳ ಹಿತಾಸಕ್ತಿ,ಸ್ಥಳೀಯ ಅಗತ್ಯಗಳು ಲೆಕ್ಕಕ್ಕೆ ಇರುವುದಿಲ್ಲ, ಈಗ ಪೆಟ್ರೋಲ್ ನ್ನು ಜಿಎಸ್ಟಿಗೆ ಸೇರಿಸುವುದರ ಮೂಲಕ ರಾಜ್ಯಗಳನ್ನು ಶೋಶಿಸಿದಂತೆ ಎಂದು ಹೇಳಿದರು .ಇನ್ನೂ ಮುಂದುವರೆದು  ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ತಿಳಿಸಿದರು.


ಸದ್ಯಕ್ಕೆ ಪೆಟ್ರೋಲ್ ನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನಿಸಬಹುದು, ಆದರೆ ಕಾಲಾಂತದಲ್ಲಿ  ಅದರ ಮೇಲಿನ ತೆರೆಗೆಯಿಂದ ಬರುತ್ತಿದ್ದ ಸಂಪನ್ಮೂಲವು ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಇದರಿಂದಾಗಿ ರಾಜ್ಯಗಳ ಅಭಿವೃದ್ದಿಗೆ ಪೆಟ್ಟು ಬೀಳುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.


ಇದನ್ನೂ ಓದಿ: Unlock in Karnataka : ನಾಳೆಯಿಂದ ರಾಜ್ಯದಲ್ಲಿ 'ಅನ್ ಲಾಕ್' ಪ್ರಕ್ರಿಯೆ ಆರಂಭ!


ಅದ್ದರಿಂದ ಪೆಟ್ರೋಲ್ ನ್ನು ಜಿಎಸ್ಟಿಗೆ ಸೇರಿಸುವುದು ಇದಕ್ಕೆ ಪರಿಹಾರವಲ್ಲ, ಆದ್ದರಿಂದ ಕೇಂದ್ರ ಸರ್ಕಾರವು ವಿಪರೀತವಾಗಿ ವಿದಿಸುತ್ತಿರುವ ಸುಂಕವನ್ನು ಕಡಿತ ಮಾಡಬೇಕು. ಜೊತೆಗೆ ರಾಜ್ಯ ಸರ್ಕಾರವು ಕೂಡ ಸುಂಕವನ್ನು ಕಡಿತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.


ಪೆಟ್ರೋಲ್‌ ಮೇಲೆ ಕೇಂದ್ರ,ಮತ್ತ್ತು ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ  ತೆರಿಗೆ ದರವನ್ನುಕಡಿತಗೊಳಿಸುವ ಮೂಲಕ ಬೆಲೆ ಏರಿಕೆಯನ್ನು ತಡೆಯಬೇಕು ಎಂದು ಜೆಡಿಎಸ್ ಆಗ್ರಹಿಸುತ್ತದೆ. ಇದರ ಜೊತೆಗೆ ಪೆಟ್ರೋಲನ್ನು ಜಿಎಸ್ಟಿ ವ್ಯಾಪ್ತಿಗೆ ಸೇರಿಸುವ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.