ಬೆಂಗಳೂರು: ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭ ಮಾಡುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿಯನ್ನು ಸರಕಾರ ನೀಡಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ (Dr CN Ashwathnarayan) ಹೇಳಿದರು.


ಇಂದಿನಿಂದ Unlock-5 ಜಾರಿ: ಏನಿರುತ್ತೆ? ಏನಿರಲ್ಲ? ಎಂಬುದರ ಬಗ್ಗೆ ಇಲ್ಲಿದೆ ವಿವರ


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿಯನ್ನು (Guidline) ನೀಡಿದೆ. ಅದರಂತೆ ರಾಜ್ಯ ಸರಕಾರ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.‌ ಸುರೇಶ್‌ ಕುಮಾರ್‌ (S Suresh Kumar) ಅವರ ಜತೆಗೆ ಅಂತಿಮ ಹಂತದ ಚರ್ಚೆ ನಡೆಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದರು.


ಸದ್ಯಕ್ಕಿಲ್ಲ ಶಾಲಾ-ಕಾಲೇಜುಗಳ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ


ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿತರ ಜತೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.


COVID-19 ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭ ಮಾಡಲಾಗುವುದು ಎಂದು ಅವರು ತಿಳಿಸಿದರು.