ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ

HD Kumaraswamy vs Siddaramaiah: ಕುಮಾರಸ್ವಾಮಿಗೆ ಭಯ ಶುರುವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ ಅನ್ನೋ ಆತಂಕ ಅವರಲ್ಲಿದೆ. ತನಿಖೆ ಮಾಡಿ‌ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಲೋಕಾಯುಕ್ತರು ಕೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Written by - Puttaraj K Alur | Last Updated : Aug 21, 2024, 05:05 PM IST
  • ಸಂದರ್ಭ ಬಂದರೆ ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ
  • ಎಚ್‌ಡಿಕೆಯನ್ನು ಬಂಧಿಸುವ ಸಂದರ್ಭ ಬಂದರೆ ನಾವು ಹಿಂದೇಟು ಹಾಕುವುದಿಲ್ಲ
  • ಕುಮಾರಸ್ವಾಮಿಗೆ ಈಗ ಭಯ ಶುರುವಾಗಿದೆ ಎಂದ ಸಿಎಂ ಸಿದ್ದರಾಮಯ್ಯ
ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ title=
ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಗುಡುಗು!

HD Kumaraswamy vs Siddaramaiah: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ನಿಯಮ ಉಲ್ಲಂಘಿಸಿ ಗಣಿ ಕಂಪನಿಗೆ ಮಂಜೂರಾತಿ ನೀಡಿದ ವಿಚಾರವಾಗಿ ಮಾತನಾಡಿರುವ ಅವರು, ಸಂದರ್ಭ ಬಂದರೆ ಕುಮಾರಸ್ವಾಮಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. 

ಭರ್ತಿಯಾಗಿರುವ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯನವರು ಬುಧವಾರ ಬಾಗಿನ ಅರ್ಪಿಸಿದರು. ಇದಕ್ಕೂ ಮೊದಲು ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ಕುಮಾರಸ್ವಾಮಿಯನ್ನು ಬಂಧಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಅವರನ್ನು ಬಂಧಿಸುವ ಸಂದರ್ಭ ಬಂದರೆ ಬಂಧಿಸುವುದರಲ್ಲಿ ಹಿಂದೇಟು ಹಾಕುವುದಿಲ್ಲ. ಈಗ ಅಂತಹ ಸನ್ನಿವೇಶ ಇಲ್ಲವೆಂದು ಸ್ಪಷ್ಟಣೆ ನೀಡಿದ್ದಾರೆ.

ಇದನ್ನೂಓದಿ: ರಾಜಧಾನಿಗೆ ಲಗ್ಗೆ ಇಟ್ಟಿದೆ ಡೆಡ್ಲಿ ಝೀಕಾ ವೈರಸ್..!

ಕುಮಾರಸ್ವಾಮಿಗೆ ಈಗ ಭಯ ಶುರುವಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ ಅನ್ನೋ ಆತಂಕ ಅವರಲ್ಲಿದೆ. ತನಿಖೆ ಮಾಡಿ‌ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಲೋಕಾಯುಕ್ತರು ಕೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಆಲಮಟ್ಟಿಗೆ ಬಾಗಿನ ಅರ್ಪಣೆ

ಸಿಎಂ ಸಿದ್ದರಾಮಯ್ಯನವರು ಬುಧವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ HAL​ನಿಂದ ವಿಮಾನದಲ್ಲಿ ಪ್ರಯಾಣಿಸಿ, 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್​ಸ್ಟ್ರಿಪ್​ಗೆ ತಲುಪಲಿದರು. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಿದರು. ಬಳಿಕ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೃಹತ್ ‌ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರಿದ್ದರು.

ಇದನ್ನೂಓದಿ: ಬಿಜೆಪಿ ಪ್ರಾಸಿಕ್ಯೂಷನ್ ಅಸ್ತ್ರಕ್ಕೆ ಕಾಂಗ್ರೆಸ್‌ ಪ್ರತ್ಯಾಸ್ತ್ರ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News