ಮುಂದಿನ ಚುನಾವಣೆಯಲ್ಲಿ 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆ: ಸಿದ್ದರಾಮಯ್ಯ
ಜನರನ್ನು ತಾವು ಅಧಿಕಾರಕ್ಕೆ ಬರುತ್ತೇವೆ ಎಂದು ನಂಬಿಸಲು ಜೆಡಿಎಸ್ನವರು ಸುಳ್ಳು ಸುಳ್ಳು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾವು 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತೇವೆ, ಹೀಗಿದ್ದಾಗ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆ ಎಲ್ಲಿ ಬರುತ್ತೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕಾಂಗ್ರೆಸ್ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಬೇರೆ ಪಕ್ಷಗಳಿಂದ ಕೆಲವರು ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು. ರಾತ್ರಿ ಕಂಡಿದ್ದ ಬಾವಿಗೆ ಹಗಲುಹೊತ್ತು ಯಾರಾದರೂ ಬೀಳುತ್ತಾರಾ? ಜೆಡಿಎಸ್ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಸುಳ್ಳು ಹೇಳುತ್ತಿದ್ದಾರೆ, ಅವರಿಗೆ ಬಾಯಿಯೇ ಬಂಡವಾಳ’ ಅಂತಾ ಕುಟುಕಿದ್ದಾರೆ.
ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆ: ಜನರು ತಕ್ಕ ಉತ್ತರ ಕೊಡ್ತಾರೆ- ಸಚಿವೆ ಶಶಿಕಲಾ ಜೊಲ್ಲೆ
‘ನಾನು ಜೆಡಿಎಸ್ ಪಕ್ಷದ ಅಧ್ಯಕ್ಷನಾಗಿದ್ದಾಗ ಪಕ್ಷ ಮೊದಲ ಬಾರಿ 59 ಸೀಟುಗಳನ್ನು ಗೆದ್ದಿತ್ತು. ಅದಾದ ನಂತರ ಇದಕ್ಕಿಂತ ಕಡಿಮೆ ಸೀಟುಗಳನ್ನು ಜೆಡಿ ಎಸ್ ಗೆದ್ದಿದೆಯೇ ಹೊರತು ಹೆಚ್ಚಾಗಿಲ್ಲ. ಕಳೆದ ಬಾರಿ 37 ಸ್ಥಾನ ಗೆದ್ದರು, ಇದು ಪೂರ್ಣ ಬಹುಮತ ಪಡೆದಂತೆಯಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಿಂದೂ ವಿರೋಧಿ ಕಾಂಗ್ರೆಸ್ ಧೋರಣೆ ಬಗ್ಗೆ ಟೀಕಿಸಿದ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ
‘ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆ ಮೂಲಕ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಎಂದಾದರೂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆಯಾ? ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಬಿಜೆಪಿಯಲ್ಲಿ ಇದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.