ನವದೆಹಲಿ: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ 20 ರಿಂದ 24 ಸೀಟು ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಹೈಕಮಾಂಡ್‍ಗೆ ಭರವಸೆ ನೀಡಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕದ ಸಚಿವರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾರೆ.   


COMMERCIAL BREAK
SCROLL TO CONTINUE READING

‘ನಮ್ಮ‌ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಾರಿಯ "ಕರ್ನಾಟಕ ಅಭಿವೃದ್ಧಿ ಮಾದರಿ" ಲೋಕಸಭಾ ಚುನಾವಣೆಯಲ್ಲಿ ಫಲನೀಡುವ ಭರವಸೆ ನಮಗಿದೆ. ನಾವು 20-24 ಸ್ಥಾನಗಳಲ್ಲಿ ಜಯಗಳಿಸಲಿದ್ದೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  


2 ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಪ್ರತಿಯೊಬ್ಬ ಫಲಾನುಭವಿಗೂ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಸಭೆಯಲ್ಲಿದ್ದ ಹಲವು ನಾಯಕರು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೆ ಹೆದರ್ತಿದ್ದ: ಹಣೆಬರಹದಲ್ಲಿ ಬರೆದಿತ್ತು ಸಿಎಂ ಆಗ್ಬಿಟ್ಟ!



ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ನಾವು ಬಜೆಟ್‍ನಲ್ಲಿ 5 ಗ್ಯಾರಂಟಿಗಳಿಗೆ ಹಣ ಒದಗಿಸುವುದರ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ ಎಂದು ಅವರು ತಿಳಿಸಿದರು.


ಪ್ರತೀದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.  


ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ತನ್ನ ಪಟಾಲಂ ಸಾಕಲು ಧನಸಂಗ್ರಹಿಸುತ್ತಿರುವ ಕಾಂಗ್ರೆಸ್: ಬಿಜೆಪಿ ಆರೋಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.