ಬೆಂಗಳೂರು: ಅಧಿಕಾರಕ್ಕೆ ಬಂದು ಮೂರೇ ತಿಂಗಳಿಗೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಬೆಂಕಿ ಹೊತ್ತುಕೊಂಡಿದೆ ಎಂದು ಬಿಜೆಪಿ ಟೀಕಿಸಿದೆ. ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತರಾದ ಬಿ.ಕೆ.ಹರಿಪ್ರಸಾದ್ ಅವರ ಬಾಯಿ ಮುಚ್ಚಿಸಲು ಮುಖ್ಯಮಂತ್ರಿಗಳು ಸಚಿವ ಕೆ.ಎನ್.ರಾಜಣ್ಣ ಅವರ ಮೂಲಕ ಡಿಸಿಎಂ ಸ್ಥಾನದ ದಾಳ ಉರುಳಿಸಿದ್ದರು’ ಎಂದು ಕುಟುಕಿದೆ.


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಆಗಬೇಕಿದ್ದ ಡಾ.ಜಿ.ಪರಮೇಶ್ವರ್ ಅವರು ಇದೀಗ ಕೊನೆ ಪ್ರಯತ್ನವಾಗಿ ಡಿಸಿಎಂ ಸ್ಥಾನಕ್ಕಾಗಿ ಹೈಕಮಾಂಡ್ ಮೊರೆ ಹೋಗಲಿದ್ದಾರೆ. ಅಂತೂ ಡಿಸಿಎಂ ಸ್ಥಾನದ ಅಸ್ತ್ರ ಇದೀಗ ಸಿದ್ದರಾಮಯ್ಯ ಅವರ ಸಂಪುಟವನ್ನೇ ಅಲುಗಾಡಿಸುತ್ತಿದೆ. ಬರಗಾಲ ರಾಜ್ಯದ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರ ಒಳಜಗಳ, ಬಣ ಜಗಳಗಳಲ್ಲೇ ಕಾಲ ಹರಣ ಮಾಡುತ್ತಿದೆ ಎಂದು ಬಿಜೆಪಿ ಟೀಕಿಸಿದೆ.


ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಗಡೆ ಹಿನ್ನೆಲೆ


ಸಿಎಂ ಬದಲಾಯಿಸುತ್ತೇವೆಂದು ಹೊರಟ ಡಿ.ಕೆ.ಶಿವಕುಮಾರ್ ಅವರ ಬಣಕ್ಕೆ ಸರ್ಕಾರವನ್ನೇ ಬೀಳಿಸುತ್ತೇವೆಂದು ಸಿದ್ದರಾಮಯ್ಯ ಅವರ ಬಣ ಬೆದರಿಕೆಯೊಡ್ಡಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಕಾವೇರಿ ವಿಚಾರದಲ್ಲಿ ಡಿಕೆಶಿ ಕಳ್ಳಾಟ..!


ಕಾವೇರಿ ನದಿ ನೀರಿನ ವಿಚಾರದಲ್ಲಿ ಡಿಸಿಎಂ ಡಿಕೆಶಿ ಅವರು ಕಳ್ಳಾಟವಾಡುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗಾಗಿ ನಮ್ಮ ಕಾವೇರಿಯನ್ನು ಬಲಿ ಕೊಡುತ್ತಿದ್ದಾರೆ. ತಮ್ಮ I.N.D.I. Alliance ಮೆಚ್ಚಿಸಲು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಕಾಂಗ್ರೆಸ್ ಸರ್ಕಾರ, ಈಗ ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಎತ್ತಿಕಟ್ಟುವ ಕೆಲಸಕ್ಕಿಳಿದಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: ಒಂದು ಹನಿ ನೀರು ಬಿಡಲ್ಲ ಎನ್ನುತ್ತಲೇ ತಮಿಳುನಾಡಿಗೆ ಮತ್ತೆ ನೀರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.