ಹವಾಮಾನ ವೈಪರಿತ್ಯ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ... ಶಾಲಾ-ಕಾಲೇಜುಗಳಿಗೆ ರಜೆ..!
Weather Update: ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತದ ಅಬ್ಬರ ಜೋರಾಗಿದ್ದು ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Rain Alert: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಾರದಿಂದ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ನಗರದ ಕೆಲ ಭಾಗಗಳಲ್ಲಿಂದು ಗುಡುಗು ಸಹಿತ ಮಳೆಯಾಗೋ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತದ ಅಬ್ಬರ ಜೋರಾಗಿದ್ದು ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ ನಾಲ್ಕು ದಿನ ಭಾರೀ ಮಳೆ ಎಚ್ಚರಿಕೆ:
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು ಕಬ್ಬನ ಪಾರ್ಕ್, ರೇಸ್ ಕೋರ್ಸ್ ರೋಡ್, ಮಾರತಳ್ಳಿ ಮೆಜೆಸ್ಟಿಕ್, ಗಾಂಧಿನಗರ ಸೇರಿದಂತೆ ಹಲವೆಡೆ ಮಳೆ ಮಲೆಯಾಗಿದೆ. ಇಂದು ದಿನವಿಡೀ ಇದೆ ವಾತಾವರಣ ಮುಂದುವರೆಯಲಿದ್ದು, ಮುಂದಿನ ನಾಲ್ಕು ದಿನಗಳ ಕಾರ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರನ್ನು ಹೊರತುಪಡಿಸಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆ ವಾತಾವರಣವಿದೆ.
ಇದನ್ನೂ ಓದಿ- Daily GK Quiz: ಯಾವ ಪ್ರಾಣಿ ಕಪ್ಪು ಮತ್ತು ಬಿಳಿ ಪಟ್ಟೆಗಳಿಗೆ ಹೆಸರುವಾಸಿಯಾಗಿದೆ?
ಬೆಂಗಳೂರು ಹೊರವಲಯದಲ್ಲಿ ಜೋರು ಮಳೆಗೆ ಜನ ಹೈರಾಣು:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಭಾರೀ ಮಳೆಯಾಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಸರ್ಜಾಪುರ ಭಾಗಗಳಲ್ಲಿ ಜೋರು ಮಳೆಗೆ ಜನ ಹೈರಾಣಾಗಿದ್ದು ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯಿಂದ ಎಚ್ಚರಿಕೆ:
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರ ಮಳೆ ಸಾಧಯ್ತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತಕ್ಕೆ ದಕ್ಷಿಣದ ರಾಜ್ಯಗಳು ತತ್ತರ:
ಹೊಸ ಚಂಡಮಾರುತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕೇರಳ ಅಕ್ಷರಶಃ ತತ್ತರಿಸಿವೆ. ತಮಿಳುನಾಡಿನ ರಾಜಧಾನಿ ಚೆನ್ನೈ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಚೆನ್ನೈ ಮಾತ್ರವಲ್ಲದೆ, ಕರ್ನಾಟಕದ ರಾಜಧಾನಿ ಬೆಂಗಳೂರು, ಕೇರಳದ ಕೆಲವು ಜಿಲ್ಲೆಗಳಲ್ಲೂ ಡಿಸೆಂಬರ್ 16ರವರೆಗೆ ಮಳೆರಾಯ ಆರ್ಭಟಿಸಲಿದ್ದಾನೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ- Daily GK Quiz: ವಿಶ್ವಪ್ರಸಿದ್ಧ ಮೋನಾಲಿಸಾ ವರ್ಣಚಿತ್ರವನ್ನು ಚಿತ್ರಿಸಿದವರು ಯಾರು..?
ಶಾಲಾ-ಕಾಲೇಜುಗಳಿಗೆ ರಜೆ:
ಭಾರೀ ಮಳೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಪುದುಚೇರಿ, ಕಾಂಚೀಪುರಂ, ಚೆನ್ನೈ, ತಿರುವಾರೂರು, ಪುದುಕೊಟ್ಟೈ, ಕುಡ್ಡಲೋರ್, ಕರುರೂರ್, ಮೇನಿಲದುಥುರೈ, ರಾಮನಾಥಪುರಂ, ಅರಿಯಾಲೂರ್, ಚೆಂಗಲ್ಪಟ್ಟು, ತಿರುವಾಲೂರ್, ರಾಣಿಪೆಟ್ಟೈ, ವೆಲ್ಲೋರ್, ತಿರುಪಟ್ಟು, ಥೌತುಕಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.