Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ  ಸಾಧ್ಯತೆ ಇದೆ.

Written by - Puttaraj K Alur | Last Updated : Nov 6, 2021, 12:37 PM IST
  • ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ
  • ಬೆಂಗಳೂರು ಸೇರಿ ರಾಜ್ಯದ ಕರಾವಳಿ, ಒಳನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ 3 ದಿನ ಭಾರೀ ಮಳೆ
  • ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಜನರು ರಾತ್ರಿಯಿಡೀ ‘ದೀಪಾವಳಿ ಹಬ್ಬ’ದ ಜಾಗರಣೆ ಮಾಡಿದ್ದರು
Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ title=
ಮುಂದಿನ 3 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು: ಅರಬ್ಬಿ ಸಮುದ್ರ(Arabian Sea)ದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(India Meteorological Department) ಎಚ್ಚರಿಕೆ ನೀಡಿದೆ. ವರುಣನ ಆರ್ಭಟಕ್ಕೆ ಈಗಾಗಲೇ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಂಗಳೂರಿನ ಪ್ರಮುಖ ಪ್ರದೇಶಗಳು ಜಲಾವೃತಗೊಂಡು ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿತ್ತು.

ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ವಾಹನ ಸವಾರರು ಹೈರಾಣಾಗಿದ್ದರು. ಮಳೆ ಹೊಡೆತಕ್ಕೆ ಬೆಂಗಳೂರು(Bengaluru Rains) ರಸ್ತೆಗಳೆಲ್ಲಾ ನದಿಗಳಂತೆ ತುಂಬಿ ಹರಿಯುತ್ತಿರುವ ದೃಶ್ಯ ಕಂಡುಬಂದಿವೆ. ಕೆಲವು ಕಡೆ ಮಳೆನೀರಿನಲ್ಲಿ ಬೈಕ್, ಕಾರು ಕೊಚ್ಚಿಕೊಂಡು ಹೋಗಿವೆ. ಮನೆಗಳಿಗೆ ನೀರು ನುಗ್ಗಿ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿತ್ತು. ಬೆಂಗಳೂರಿನ ಕೆಲವು ಪ್ರದೇಶದ ಜನರು ಮಳೆಯಿಂದಾಗಿ ರಾತ್ರಿಯಿಡೀ ‘ದೀಪಾವಳಿ ಹಬ್ಬ’ದ ಜಾಗರಣೆ ಮಾಡಿದ್ದರು. ಇಷ್ಟಕ್ಕೆ ನಿಲ್ಲದ ಮಳೆ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Anganwadis : ನ.8 ರಿಂದ ರಾಜ್ಯದಲ್ಲಿ ಅಂಗನವಾಡಿ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಓಪನ್  

ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ(Coastal Karnataka), ಒಳನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ  ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆ ಜೊತೆ ಜೊತೆಗೆ ರಾಜ್ಯದಲ್ಲಿ ಚಳಿಗಾಲ  ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ.

ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಚಿಕ್ಕಮಗಳೂರು(Chikmagalur), ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ನದಿಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆಸೂಚಿಸಲಾಗಿದೆ.

ಇದನ್ನೂ ಓದಿ: K Sudhakar : ಪುನೀತ್ ರಾಜ್‌ಕುಮಾರ್ ನಿಧನ : ರಾಜ್ಯ ಸರ್ಕಾರದಿಂದ ಜಿಮ್‌ಗಳಿಗೆ ಹೊಸ ಮಾರ್ಗಸೂಚಿಗಳು  

ರಾಜ್ಯದಲ್ಲಿ ನೈಋತ್ಯ ಮುಂಗಾರು ನಿರ್ಗಮನದ ಬೆನ್ನಲ್ಲಿಯೇ ಈಶಾನ್ಯ ಮಾರುತುಗಳ ಪ್ರವೇಶವಾಗಿದ್ದು, ಹಿಂಗಾರು ಮಳೆ(North East Monsoon) ಆರಂಭವಾಗಿದೆ. ಕಳೆದ ಬುಧವಾರವೇ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕ(Karnataka) ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಹಿಂಗಾರು ಪ್ರವೇಶವಾಗಿದೆ. ಇದರ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News