Karnataka Weather: ರಾಜ್ಯದಲ್ಲಿ ಜನವರಿ ತಿಂಗಳು ಅಂತ್ಯವಾಗುತ್ತಿದ್ದಂತೆ ಚಳಿ ಕಡಿಮೆಯಾಗಿ ಉಷ್ಣಾಂಶ ಹೆಚ್ಚಾಗಲಿದೆ!

Weather Report: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಚಳಿ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಮತ್ತೆ ಜನವರಿ ಅಂತ್ಯವಾಗಿ ಫೆಬ್ರವರಿಗೆ ಕಾಲಿಡುತ್ತಿದ್ದಂತೆ ಇನ್ನೂ ಕರ್ನಾಟಕದಲ್ಲಿ ಹೆಚ್ಚು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಉಷ್ಣಾಂಶೂ ಶುರುವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ. 

Written by - Zee Kannada News Desk | Last Updated : Feb 1, 2024, 08:52 AM IST
  • ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ.
  • ರಾಜ್ಯದಲ್ಲಿ ಚಳಿ ಮುಂದುವರೆಯಲಿದದು, ಕೆಲವೆಡೆ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • ರಾಜ್ಯದಲ್ಲಿ ಕೆಲವೆಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಮಂಜು ಹೆಚ್ಚಾಗಿ ಬೀಳುತ್ತಿದ್ದರೇ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ.
Karnataka Weather: ರಾಜ್ಯದಲ್ಲಿ ಜನವರಿ ತಿಂಗಳು ಅಂತ್ಯವಾಗುತ್ತಿದ್ದಂತೆ ಚಳಿ ಕಡಿಮೆಯಾಗಿ ಉಷ್ಣಾಂಶ ಹೆಚ್ಚಾಗಲಿದೆ! title=

Weather Report In Karnataka: ಕರ್ನಾಟಕದಲ್ಲಿ ಜನವರಿ ತಿಂಗಳು ಕಳೆದು ಫೆಬ್ರವರಿಗೆ ಕಾಲಿಡುತ್ತಿದ್ದಂತೆ  ಚಳಿ ಕಡಿಮೆಯಾಗಿ ಸದ್ಯ ಉಷ್ಣಾಂಶ ತುಸು ಹೆಚ್ಚಾಗುತ್ತಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ  ಒಣಹವೆ ಮುಂದುವರೆಯಲಿದೆ. ಆದರೆ ಉತ್ತರ ಒಳನಾಡು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಚಳಿ ಇದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಳಿ ಮುಂದುವರೆಯಲಿದದು, ಕೆಲವೆಡೆ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಎಂದು ವರದಿಯಾಗಿದೆ.
ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಮಂಗಳೂರು ಏರ್​ಪೋರ್ಟ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 
ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಹಾವೇರಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಶಿವಮೊಗ್ಗದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

ರಾಜ್ಯದಲ್ಲಿ ಕೆಲವೆಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಮಂಜು ಹೆಚ್ಚಾಗಿ ಬೀಳುತ್ತಿದ್ದರೇ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಬೆಂಗಳೂರು ಹೊರತು ಪಡಿಸಿ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣವು ಹೆಚ್ಚಾಗುತ್ತಾ ಇದೆ. ಚಳಿ ಕಡಿಮೆಯಾಗುತ್ತಾ ಬರ್ತಾ ಇದೆ. ಕರ್ನಾಟಕದಲ್ಲಿ ಜನ ಮಳೆಗಾಗಿ ಕಾಯ್ತಾ ಇದ್ದು, ಆದರೆ ಚಳಿ ಹೆಚ್ಚಾಗುತ್ತಲೇ ಇದೆ. ಮಾರ್ಚ್‍ವರೆಗೆ ತನಕ ಮಳೆ ಆಗುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿತ್ತು. ಸದ್ಯ ಚಳಿಯ ಪ್ರಮಾಣದ ಜೊತೆ ಉಷ್ಣಾಂಶವೂ ಹೆಚ್ಚಾಗಲಿದೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News