ರಾಜ್ಯದಲ್ಲಿ ತಗ್ಗಿದ್ದ ಮುಂಗಾರು ಮತ್ತೆ ಉಲ್ಬಣಗೊಳ್ಳಲಿದೆ. ಇಂದಿನಿಂದ 5 ದಿನ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ, ಯಾದಗಿರಿ, ರಾಜಚೂರು, ಗದಗ, ಕೊಪ್ಪಳ, ಬಲ್ಲಾರ್, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆ ಭವಿಷ್ಯ ನುಡಿದಿರುವ ಐಎಂಡಿ ಈ 8 ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಿದೆ.
ಐಎಂಡಿ ನೀಡಿರುವ ಮಾಹಿತಿಯ ಪ್ರಕಾರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಐಎಂಡಿ ಭವಿಷ್ಯ ನುಡಿದಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಕೂಡ ಐದು ದಿನಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಾಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.