ಮುಂದಿನ ಏಳು ದಿನಗಳ ಕಾಲ ಕರ್ನಾಟಕಕ್ಕೆ ಮುನ್ಸೂಚನೆ
ಮಂಗಳವಾರದ ಈ ದಿನ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬುಧವಾರ (03ನೇ ಜುಲೈ) ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ. ದಕ್ಷಿಣ ಒಳನಾಡಿನ ಪ್ರತ್ಯೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಗುರುವಾರ (04ನೇ ಜುಲೈ) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಎಚ್ಚರಿಕೆ.
ಶುಕ್ರವಾರ (05ನೇ ಜುಲೈ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ ಬಗ್ಗೆ ಐಎಂಡಿ ಎಚ್ಚರಿಕೆ.
ಶನಿವಾರ (06 ಜುಲೈ) ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ.
ಭಾನುವಾರ (08ನೇ ಜುಲೈ) ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ.
ಸೋಮವಾರ (08ನೇ ಜುಲೈ) ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.