ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೆಯೇ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದೆ.ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ.
ತುಲಾ ಸಂಕ್ರಮಣ ಜಾತ್ರೆ ಸಂಬಂಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ.
ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ.