ಬಿಜೆಪಿ ಶಕ್ತಿ ಕುಗ್ಗಿಸಲು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ- ದೇವೇಗೌಡ

Last Updated : Mar 17, 2019, 06:49 PM IST
ಬಿಜೆಪಿ ಶಕ್ತಿ ಕುಗ್ಗಿಸಲು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ- ದೇವೇಗೌಡ  title=
photo:ANI

ಬೆಂಗಳೂರು:  ರಾಜ್ಯದಲ್ಲಿ ಬಿಜೆಪಿ ಶಕ್ತಿ ಕುಂದಿಸಲು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿನ ಕಾರ್ಯತಂತ್ರದ ಬಗ್ಗೆ ತಿಳಿಸಿದ ದೇವೇಗೌಡ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ 20-8 ರ ಸೂತ್ರದ ಅನುಗುಣವಾಗಿ ಸ್ಪರ್ಧಿಸಲಿವೆ ಎಂದು ಸ್ಪಷ್ಟಪಡಿಸಿದರು.

"ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಜೊತೆ ಮೈತ್ರಿ ಸರ್ಕಾರವನ್ನು ನಡೆಸುತ್ತಿದ್ದೇವೆ. ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್ ಪಕ್ಷವು 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಬಿಜೆಪಿ ಶಕ್ತಿಯನ್ನು ಕುಗ್ಗಿಸಲು ಕಾಂಗ್ರೆಸ್ ಹಾಗೋ ಜೆಡಿಎಸ್ ಜಂಟಿಯಾಗಿ ಎಲ್ಲ ಪ್ರಯತ್ನವನ್ನು ಮಾಡಲಿದೆ "ಎಂದು ದೇವೇಗೌಡ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದರು.

ಇತ್ತೀಚಿಗಷ್ಟೇ ಈ ಹಿಂದೆ ಜೆಡಿಎಸ್ ನಲ್ಲಿದ್ದ ಡ್ಯಾನಿಸ್ ಅಲಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 20-8 ರ ಸೂತ್ರದ ಅನುಗುಣವಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದರು.

Trending News