ಮುಂಬೈ: ಮೈತ್ರಿ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಇದರಿಂದ ಬೇಸರಗೊಂಡು ಜೆಡಿಎಸ್​ನ ಮೂವರು ಕಾಂಗ್ರೆಸ್​ನ 11 ಶಾಸಕರು ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಮುಂಬೈ ಹೋಟೆಲ್​ನಲ್ಲಿ ಸುದ್ದಿಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿದ ಕೆ.ಆರ್. ಪೇಟೆ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರಿಂದ ಅಸಮಾಧಾನಗೊಂಡು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.



ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರೆಲ್ಲ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ನಾರಾಯಣ ಗೌಡ, ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ಆದರೆ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದರು. ಇದೇ ಸಂದರ್ಭದಲ್ಲಿ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ವಾಪಸ್ ಆಗುವುದಾಗಿ ತಿಳಿಸಿದರು.