ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ನಿರ್ಬಂಧಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಮತ್ತು ಅಗತ್ಯವಿದ್ದರೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ಯಾವುದೇ ಸಂಘಟನೆಯು ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ತೊಂದರೆ ನೀಡಬಾರದು. ತಮಿಳುನಾಡಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಾವು ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದರು.
ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮೇಲೆ ನಿರ್ಬಂಧಗಳನ್ನು ವಿಧಿಸುವ ಪ್ರಸ್ತಾಪದ ಕುರಿತಾದ ಪ್ರಶ್ನೆಗಳಿಗೆ ಉತ್ತರವಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ದೇವಾಲಯಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸುವಂತೆ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ ಬಳಕೆ ಈ ಹೇಳಿಕೆ ನೀಡಿದ್ದಾರೆ.
"ಯುವ ಮನಸ್ಸುಗಳ ಬ್ರೈನ್ ವಾಶ್ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ವಿರುದ್ಧವಾದ ತತ್ವಶಾಸ್ತ್ರವನ್ನು ಪ್ರಚಾರ ಮಾಡುತ್ತಿದೆ" ಎಂದು ಆರೋಪಿಸಿದ್ದರು. ಈ ಮಧ್ಯೆ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಹೇಳಿಕೆ ನೀಡಿದ ನಂತರ ಕಳೆದ ಮೂರು ದಿನಗಳಿಂದ ತಮಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
"ಕಳೆದ ಎರಡು ದಿನಗಳಿಂದ, ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ RSS ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆ ಮತ್ತು ಅತ್ಯಂತ ಕೆಟ್ಟ ನಿಂದನೆಗಳಿಂದ ಕರೆಗಳು ಬರುತ್ತಿವೆ" ಎಂದು ಖರ್ಗೆ ಹೇಳಿದರು.
ಇದನ್ನೂ ಓದಿ: ಭಾರತದಲ್ಲಿಯೂ ಶುರುವಾಯ್ತಾ Gen Z ಪ್ರತಿಭಟನೆ: ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೋರಾಟ
ಇದನ್ನೂ ಓದಿ: ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿಗೆ ಹಾಕಿದ್ದ ನಾಲ್ಕೂವರೆ ಕೆಜಿ ಬಂಗಾರ ಕಳವು









