'KSRTC' ಟ್ರೇಡ್ ಮಾರ್ಕ್ ರದ್ದುಗೊಳಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ' ಹೇಳಿದ್ದೇನು?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಟ್ರೇಡ್ ಮಾರ್ಕ್ ಆಗಿರುವ  KSRTC ಯನ್ನು ಇನ್ನೂ ಮುಂದೆ ಬಳಸುವಂತಿಲ್ಲ ಎಂದು ಕೇಂದ್ರದ ಟ್ರೇಡ್ ಮಾರ್ಕ್ ನೋಂದಣಿ ಕಚೇರಿ ಅಂತಿಮ ತೀರ್ಪನ್ನು ಪ್ರಕಟಿಸಿದ ಬೆನ್ನಲ್ಲೇ ಈಗ ಕೆ.ಎಸ್.ಆರ್.ಟಿ.ಸಿ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸ್ಪಷ್ಟಪಡಿಸಿದೆ.  

Last Updated : Jun 4, 2021, 08:54 PM IST
  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಟ್ರೇಡ್ ಮಾರ್ಕ್ ಆಗಿರುವ KSRTCಯನ್ನು ಇನ್ನೂ ಮುಂದೆ ಬಳಸುವಂತಿಲ್ಲ ಎಂದು ಕೇಂದ್ರದ ಟ್ರೇಡ್ ಮಾರ್ಕ್ ನೋಂದಣಿ ಕಚೇರಿ ಅಂತಿಮ ತೀರ್ಪನ್ನು ಪ್ರಕಟಿಸಿದ ಬೆನ್ನಲ್ಲೇ ಈಗ ಕೆ.ಎಸ್.ಆರ್.ಟಿ.ಸಿ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸ್ಪಷ್ಟಪಡಿಸಿದೆ.
'KSRTC' ಟ್ರೇಡ್ ಮಾರ್ಕ್ ರದ್ದುಗೊಳಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ' ಹೇಳಿದ್ದೇನು? title=
Photo Courtesy: Facebook

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಟ್ರೇಡ್ ಮಾರ್ಕ್ ಆಗಿರುವ  KSRTC ಯನ್ನು ಇನ್ನೂ ಮುಂದೆ ಬಳಸುವಂತಿಲ್ಲ ಎಂದು ಕೇಂದ್ರದ ಟ್ರೇಡ್ ಮಾರ್ಕ್ ನೋಂದಣಿ ಕಚೇರಿ ಅಂತಿಮ ತೀರ್ಪನ್ನು ಪ್ರಕಟಿಸಿದ ಬೆನ್ನಲ್ಲೇ ಈಗ ಕೆ.ಎಸ್.ಆರ್.ಟಿ.ಸಿ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಸ್ಪಷ್ಟಪಡಿಸಿದೆ.  

ಈ ಕುರಿತಾಗಿ ಪತ್ರಿಕಾ ಪ್ರಕಟನೆ ಮೂಲಕ ಸ್ಪಷ್ಟನೆ ನೀಡಿರುವ ಕೆ ಎಸ್ ಆರ್ ಟಿ ಸಿ (KSRTC)  ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ.ಕಳಸದ "ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ  ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ. ಇದು ವಸ್ತುಷಃ ಸತ್ಯಕ್ಕೆ ದೂರವಾದ ವರದಿಯಾಗಿದೆ.ಯಾಕೆಂದರೆ ಸಂಸ್ಥೆಯು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ  ಸ್ವೀಕರಿಸಿರುವುದಿಲ್ಲ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ- Corona Virus Nomination By WHO: ಭಾರತದಲ್ಲಿ ದೊರೆತೆ Covid-19 ರೂಪಾಂತರಿಗಳಿಗೆ ನಾಮಕರಣ ಮಾಡಿದ WHO

ಇನ್ನೂ ಮುಂದುವರೆದು ಅವರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿ ಸಿ ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುಧ್ಧ   ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ. ಏತನ್ಮಧ್ಯೆ,  ಸದರಿ ಮಂಡಳಿಯನ್ನು ದಿ.04.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ,  ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು ಎಂದು ಅವರು ಸಾರಾಸಗಟಾಗಿ ಮಾಧ್ಯಮದಲ್ಲಿನ ವರದಿಗಳನ್ನು ತಳ್ಳಿ ಹಾಕಿದ್ದಾರೆ.

ಇದನ್ನೂ ಓದಿ: Whatsapp Fake Message: ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿರುವ ಈ ಲಿಂಕ್ ಅನ್ನು ಮರೆತೂ ಕೂಡ ಕ್ಲಿಕ್ ಮಾಡಬೇಡಿ

ಅಷ್ಟೇ ಅಲ್ಲದೆ ಕೆಎಸ್ಆರ್ ಟಿಸಿ ಟ್ರೇಡ್ ಮಾರ್ಕ್ ಬಳಸುವ ಬಗ್ಗೆ ಯಾವುದೇ ಆರ್ಡರ್ ಆಗಲಿ ಅಥವಾ ನಿಷೇಧವಾಗಲಿ ಇಲ್ಲ ಎಂದು  ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಟ್ರೇಡ್ ಮಾರ್ಕ್ ಕುರಿತಾಗಿ ಕೇರಳದ ಕೆ.ಎಸ್.ಆರ್ ಟಿಸಿ ಕರ್ನಾಟಕ ಸರ್ಕಾರಕ್ಕೆ ಲೀಗಲ್ ನೋಟಿಸ್ ಜಾರಿ ಮಾಡಲು ನಿರ್ಧರಿಸಿದೆ ಎನ್ನುವ ಮಾಧ್ಯಮಗಳ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು ಒಂದು ವೇಳೆ ಅಂತಹ ನೋಟಿಸ್ ಬಂದಿದ್ದೆ ಆದಲ್ಲಿ ಅದಕ್ಕೆ ಸರ್ಕಾರ ಸೂಕ್ತ ಉತ್ತರ ನೀಡಲಿದೆ.ಈ ವಿಚಾರವಾಗಿ ಕಾನೂನು ತಜ್ಞರನ್ನು ಸಂಪರ್ಕಿಸಲಾಗುವುದು ಎಂದು ಹೇಳಿದ್ದಾರೆ. ಅಷ್ಟೇ ಕಾನೂನಾತ್ಮಕ ವಲ್ಲದ ವರದಿ ಗಳನ್ನು ಪ್ರಕಟಿಸುವ ಮಾಧ್ಯಮಗಳ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News