ಫ್ರೀಡ್ಜ್ ನೀರು, ತಂಪು ಪಾನೀಯ ಬಳಕೆ ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು..?
ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್ಕ್ರೀಮ್ ಸೇವಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ಬೆಂಗಳೂರು: ಫ್ರೀಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸುತ್ತೋಲೆ ಹೊರಡಿಸಿಲ್ಲವೆಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಕೋವಿಶೀಲ್ಡ್ ಲಸಿಕೆ ಬಗ್ಗೆ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜು ಮತ್ತು ಡಾ. ಶ್ರೀ ಜಚನಿ ಪ್ರರ್ಥಮ ದರ್ಜೆ ಕಾಲೇಜುಗಳು ಪ್ರಕಟಣೆ ಹೊರಡಿಸಿದ್ದವು. ʼಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್ಕ್ರೀಮ್ ಸೇವಿಸಬಾರದುʼ ಎಂದು ತಿಳಿಸಲಾಗಿತ್ತು.
ಈ ಪ್ರಕಟಣೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಮತ್ತು ಚಿಕ್ಕಬಳ್ಳಾಪುರದ ಸರ್ವೇಕ್ಷಣ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಕೋವಿಶೀಲ್ಡ್ ಬಗ್ಗೆ ಹೊರಡಿಸಿರುವ ಪ್ರಕಟಣೆ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿದೆ.
ಕಾಲೇಜುಗಳ ಆಡಳಿತ ಮಂಡಳೀ ಹೊರಡಿಸಿರುವ ಸೂಚನಾ ಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸ್ಷಪ್ಟನೆ ನೀಡಿದ್ದು, ʼಇದು ಸತ್ಯಕ್ಕೆ ದೂರವಾದ ಮಾಹಿತಿ, ನಾವು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲʼವೆಂದು ತಿಳಿಸಿದೆ.
ಇದನ್ನೂ ಓದಿ: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ?: ಡಿಸಿಎಂ ಡಿ.ಕೆ. ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.