ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾರ್ಚ್ 6 ರಂದು ಶಾಸ್ತ್ರೀಯ ಗಾಯಕಿ ಮತ್ತು ಭರತನಾಟ್ಯ ನೃತ್ಯಗಾರ್ತಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ಮದುವೆಯಾಗಿದ್ದಾರೆ.ಈ ವಿವಾಹವು ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ನಡೆಯಿತು. ಮದುವೆಯ ಕೆಲವು ಫೋಟೋಗಳು ವೈರಲ್ ಆಗಿದ್ದು, ಇದರಲ್ಲಿ ನೂತನ ದಂಪತಿಗಳಿಬ್ಬರೂ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ವಿವಾಹದ ನಂತರ, ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಮದುವೆ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸಂಪ್ರದಾಯಗಳನ್ನು ಸಂಪೂರ್ಣವಾಗಿ ಅನುಸರಿಸಲಾಯಿತು. ಇದರ ಅಡಿಯಲ್ಲಿ, 'ಕಾಶಿ ಯಾತ್ರೆ', 'ಜಿರಿಗೆ ಬೆಲ್ಲ ಮುಹೂರ್ತ' ದಂತಹ ಪ್ರಮುಖ ಆಚರಣೆಗಳನ್ನು ನಡೆಸಲಾಯಿತು.ದಕ್ಷಿಣ ಭಾರತದ ವಿವಾಹಗಳಲ್ಲಿ 'ಜೀರಿಗೆ ಬೆಲ್ಲ'ವನ್ನು ಶುಭ ಸಮಯದ ಸಂಕೇತವೆಂದು ಪರಿಗಣಿಸಲಾಗುತ್ತದೆ.ಈ ಸಾಂಪ್ರದಾಯಿಕ ಪದ್ಧತಿಗಳೊಂದಿಗೆ, ಇಬ್ಬರೂ ಪರಸ್ಪರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ.
ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ! ಮದುವೆ ವೈಭವದ ಫೋಟೋ ಇಲ್ಲಿವೆ
ಯಾರು ಈ ಶಿವಶ್ರೀ ಸ್ಕಂದಪ್ರಸಾದ್?
ಶಿವಶ್ರೀ ಸ್ಕಂದಪ್ರಸಾದ್ ಚೆನ್ನೈ ಮೂಲದ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಭರತನಾಟ್ಯ ಕಲಾವಿದೆಯಾಗಿದ್ದು, ಅವರು ಆಗಸ್ಟ್ 1, 1996 ರಂದು ಜನಿಸಿದ್ದಾರೆ. ಅವರು ಸಂಗೀತ ಮತ್ತು ನೃತ್ಯದ ಹೊರತಾಗಿ, ಅವರು ಸ್ವತಂತ್ರ ರೂಪದರ್ಶಿ ಮತ್ತು ವರ್ಣಚಿತ್ರಕಾರರೂ ಹೌದು. ಇನ್ನೂ ಶಿಕ್ಷಣದ ಬಗ್ಗೆ ಹೇಳುವುದಾದರೆ, ಅವರು ಶಾಸ್ತ್ರ ವಿಶ್ವವಿದ್ಯಾಲಯದಿಂದ ಬಯೋ-ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಕೂಡ ಪಡೆದಿದ್ದಾರೆ.ಇದಲ್ಲದೆ, ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಈಗ ವೈರಲ್ ಆಗಿರುವ ಫೋಟೋಗಳಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರು ಹಳದಿ ಕಾಂಜೀವರಂ ರೇಷ್ಮೆ ಸೀರೆಯನ್ನು ಧರಿಸಿರುವುದನ್ನು ನೋಡಬಹುದು.ಇನ್ನೊಂದೆಡೆಗೆ ತೇಜಸ್ವಿ ಸೂರ್ಯ ಚಿನ್ನದ ಮತ್ತು ಬಿಳಿ ಬಣ್ಣದ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.ಮದುವೆಯ ನಂತರ, ದಂಪತಿಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ ಮತ್ತು ಅವರ ಅಭಿಮಾನಿಗಳು ಅವರ ಹೊಸ ಜೀವನಕ್ಕೆ ಶುಭ ಹಾರೈಸುತ್ತಿದ್ದಾರೆ.
ಕನ್ನಡದಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ ಭಾಷೆ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ...
Android ಲಿಂಕ್ - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter ಲಿಂಕ್ - https://bit.ly/3n6d2R8 Facebook Link - https://bit.ly/3Hhqmcj Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram ಲಿಂಕ್ - https://bit.ly/3n6d2R8 https://www.threads.net/@zeekannadanews WhatsApp ಚಾನೆಲ್- bit.ly/46lENGm ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ.









