ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ 5 ಜಿಲ್ಲೆಗಳಲ್ಲಿ ಗಂಟೆಗೆ ಬಿರುಗಾಳಿ ಸಹಿತ ಮಳೆ!!!

ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

Written by - Puttaraj K Alur | Last Updated : Apr 4, 2025, 05:42 PM IST
  • ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ
  • ಮಿಂಚು ಮತ್ತು ಬಿರುಗಾಳಿಯೊಂದಿಗೆ ಗಂಟೆಗೆ 30-60KM ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ
  • ಮಳೆಯ ಬಗ್ಗೆ ರೈತರು ಮತ್ತು ಸಾರ್ವಜನಿಕರು ಮಳೆ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು IMD ಎಚ್ಚರಿಕೆ
ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಈ 5 ಜಿಲ್ಲೆಗಳಲ್ಲಿ ಗಂಟೆಗೆ ಬಿರುಗಾಳಿ ಸಹಿತ ಮಳೆ!!!

Karnataka Weather Update: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಮಾಹಿತಿ ನೀಡಿದ್ದು, ರಾಜ್ಯದ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಗಂಟೆಗೆ 30-60KM ವೇಗದ ಗಾಳಿ ಬೀಸುವ ಸಾಧ್ಯತೆ ಇದೆʼ ಎಂದು ತಿಳಿಸಿದೆ. 

Add Zee News as a Preferred Source

ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಿಂದ ಹಿಡಿದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಶುಕ್ರವಾರ ಮತ್ತು ಶನಿವಾರ ಸಾಧಾರಣ ಮಳೆಯೊಂದಿಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ರೈತರು ಮತ್ತು ಸಾರ್ವಜನಿಕರು ಮಳೆ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ವಿಜಯನಗರದಲ್ಲಿ ಪ್ಲಾಟ್ ಖರೀದಿಗೂ ಮುನ್ನ ಎಚ್ಚರ‌..!

ಎಲ್ಲಿಲ್ಲಿ ಮಳೆಯಾಗಲಿದೆ?

ಮುಂದಿನ 3 ಗಂಟೆಗಳಲ್ಲಿ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಬೆಂಗಳೂರು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದ್ದು, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ.   

ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಿದ್ದು, ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇದನ್ನ ಹೊರತುಪಡಿಸಿದ್ರೆ ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ: ರಾಜ್ಯದ ಪ್ರಸ್ತಾವನೆ ಮಂಜೂರು ಮಾಡಲು ಮನವಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News