ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಕೊಟ್ಟ ಸೂಚನೆ ಏನು..?

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

Written by - Puttaraj K Alur | Last Updated : Sep 3, 2022, 10:31 AM IST
  • ವಿಧಾನಸಭಾ ಚುನಾವಣೆಗೆ 8 ತಿಂಗಳು ಬಾಕಿ‌ ಇದ್ದು, ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ
  • ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು
  • ವಿಮಾನ ನಿಲ್ದಾಣದಲ್ಲಿಯೇ‌ ಕೋರ್ ಕಮಿಟಿ ಸದಸ್ಯರ ಜೊತೆ ಪ್ರಧಾನಿ ಮೋದಿ ಚೆರ್ಚೆ
ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಕೊಟ್ಟ ಸೂಚನೆ ಏನು..? title=
ಪ್ರಧಾನಿ ನೀಡಿದ ಸಲಹೆಯೇನು..?

ಬೆಂಗಳೂರು: ರಾಜ್ಯ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಮಂಗಳೂರಿನಲ್ಲಿ ಸುಮಾರು 3,600 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಕಾರ್ಯಕ್ರಮದ ಬಳಿಕ ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆ ನೀಡಿ ಹೋಗಿದ್ದಾರೆ.  

ವಿಮಾನ ನಿಲ್ದಾಣದಲ್ಲಿಯೇ‌ ಕೋರ್ ಕಮಿಟಿ ಸದಸ್ಯರ ಜೊತೆ ಪ್ರಧಾನಿ ಮೋದಿ ಚೆರ್ಚೆ ನಡೆಸಿದ್ದಾರೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ 8 ತಿಂಗಳು ಬಾಕಿ‌ ಇದೆ. ಚುನಾವಣೆಗೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.    

ಇದನ್ನೂ ಓದಿ: ಮತ್ತದೇ ಹಳೆ ಕ್ಯಾಸೆಟ್, ಸುಳ್ಳು ಅಂಕಿ ಅಂಶ & ಆತ್ಮವಂಚನೆಯ ಮಾತು: ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಪ್ರಧಾನಿ ನೀಡಿದ ಸಲಹೆಯೇನು..?

ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಪಕ್ಷದ ನಾಯಕರು ಮತ್ತು ಪ್ರಮುಖರು ಒಂದಲ್ಲಾ ಒಂದು ಕಾರ್ಯಕ್ರಮಗಳ ಮೂಲಕ ಸಮಾವೇಶ ಸಭೆ ಆಯೋಜಿಸಬೇಕು. ಪಕ್ಷದಿಂದ ಜಿಲ್ಲಾವಾರು ಸಮಾವೇಶಗಳನ್ನು ಆಯೋಜಿಸಿ ಸಿದ್ಧತೆ ಮಾಡಿಕೊಳ್ಳಬೇಕು. ಸರ್ಕಾರದಿಂದ ವಿವಿಧ ಯೋಜನೆ ಉದ್ಘಾಟನೆ, ಶಂಕುಸ್ಥಾಪನೆ, ಫಲಾನುಭವಿಗಳ ಸಭೆ ನಡೆಸಬೇಕು. ಕೆಲವು ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಪರಿಸ್ಥಿತಿಗಳನ್ನು ಅರಿತು ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡಬೇಕು. ಚುನಾವಣಾ ಕಾರ್ಯದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ‌ ಮಾಡಬೇಕು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಂದುವರೆಯಿರಿ ಎಂದು ಬಿಜೆಪಿ ನಾಯಕರಿಗೆ ಸೂಚನೆ ನೀಡಿರುವ ಪ್ರಧಾನಿ ಮೋದಿ, ‘ವಿವಿಧ ಕಾರ್ಯಕ್ರಮ ಆಯೋಜಿಸಿದರೆ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತೇನೆ’ ಅಂತಾ ಹೇಳಿದ್ದಾರೆ.    

ಇದನ್ನೂ ಓದಿ: ಮೈಸೂರಿನ ಹೋಟೆಲ್‌ನಲ್ಲಿ ಪ್ರಿಯಕರನಿಂದಲೇ ಹತ್ಯೆಯಾದ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News