`ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ?`
ಗೋಕುಲಾಷ್ಟಮಿಗೂ ಇಮಾಮ್ ಸಾಬೀಗೂ ಏನು ಸಂಬಂಧ ಎಂದು ಕೇಳುವಂತೆ ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಅವರು ಪ್ರಶ್ನಿಸಿದ್ದಾರೆ.
ಬೆಂಗಳೂರು: ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಎಸ್ ಇ, ಎಸ್ ಟಿ ಯವರ ಮೀಸಲಾತಿ ತೆಗೆಯಬೇಕು ಎಂದು ಅಮೇರಿಕಾದಲ್ಲಿ ಹೇಳಿದ್ದಾರೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಸಂವಾದದ ಹೇಳಿಕೆಯನ್ನು ತಿರುಚಲಾಗಿದೆ. ಗೋಕುಲಾಷ್ಟಮಿಗೂ ಇಮಾಮ್ ಸಾಬೀಗೂ ಏನು ಸಂಬಂಧ ಎಂದು ಕೇಳುವಂತೆ ಸಾಮಾಜಿಕ ನ್ಯಾಯ, ಮೀಸಲಾತಿಗೂ ಬಿಜೆಪಿಗೂ ಏನು ಸಂಬಂಧ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಅವರು ಪ್ರಶ್ನಿಸಿದ್ದಾರೆ.
ಅವರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಎಲ್ಲಾ ಹಂತಗಳಲ್ಲು ಆರ್ ಎಸ್ ಎಸ್ ಪ್ರಣೀತ ಮನುವಾದವನ್ನು ತೂರಿಸಲು ಪ್ರಯತ್ನ ಪಡುತ್ತಿದೆ ಬಿಜೆಪಿ. ಆರ್ ಎಸ್ ಎಸ್ ಎರಡನೇ ಸರಸಂಘ ಚಾಲಕರಾಗಿದ್ದ ಗೋಲವಳ್ಕರ್ ಅವರು ತಮ್ಮ ಬಂಚ್ ಆಫ್ ಥಾಟ್ಸ್ ಪುಸ್ತಕದಲ್ಲಿ ಶ್ರೇಣಿಕೃತ ವ್ಯವಸ್ಥೆ ಇರಬೇಕು ಎಂದು ಪ್ರತಿಪಾದನೆ ಮಾಡಿದ್ದಾರೆ. ಶೋಷಿತ ವರ್ಗದ ಜನರು ಮುಂದುವರೆಯದೆ ಹಾಗೆಯೇ ಇರಬೇಕು ಎಂಬುದು ಬಿಜೆಪಿ ಹಾಗೂ ಸಂಘದ ಚಿಂತನೆ.
ಸಂವಿಧಾನ ರಚಣೆಯಲ್ಲಿ ಆರ್ ಎಸ್ ಎಸ್ ಅವರ ಕೊಡುಗೆ ಏನಿದೆ. ಅಂಬೇಡ್ಕರ್ ಅವರ ವಿಚಾರದಲ್ಲಿ ನಂಬಿಕೆಯಿಟ್ಟು ಸಂವಿಧಾನ ಜಾರಿಗೆ ತಂದ ಪಕ್ಷ ಕಾಂಗ್ರೆಸ್. ಬಾಬಾ ಸಾಹೇಬರನ್ನು ಸಂವಿಧಾನ ಕರಡು ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದು ಕಾಂಗ್ರೆಸ್ ಹಾಗೂ ನೆಹರು ಅವರು.
ಇದನ್ನೂ ಓದಿ: Daily GK Quiz: ಭಾರತದ ನೆಪೋಲಿಯನ್ ಎಂದು ಯಾರನ್ನು ಕರೆಯಲಾಗುತ್ತದೆ?
ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಆಕ್ಟ್ 1950 ಮೂಲಕ ಮೀಸಲಾತಿ ತಂದಿದ್ದು ಕಾಂಗ್ರೆಸ್ ಸರ್ಕಾರ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದಲು ಮೀಸಲಾತಿ ತರಲು ಮುಂದದಾಗ ಸಮಾಜವನ್ನು ಒಡೆದು ಆಳುವ ನೀತಿಗೆ ನೂಕಬೇಕು ಎಂದು ಪ್ರಯತ್ನಪಟ್ಟಿದ್ದು ಇದೇ ಬಿಜೆಪಿ.
ಅನಂತ್ ಕುಮಾರ್ ಹೆಗಡೆ, ಯತ್ನಾಳ್ ಅವರು ಸೇರಿದಂತೆ ಅನೇಕ ಬಿಜೆಪಿ ನಾಯಕರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಕಿತ್ತು ಹಾಕಲು ಎಂದು ಹೇಳಿದ್ದಾರೆ.
ಮೀಸಲಾತಿಯನ್ನು ಮುಂದುವರೆಸಿಕೊಂಡು ಬರುವಂತೆ ಮಾಡಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಎಂದಿಗೂ ಮೀಸಲಾತಿ ಪರವಾಗಿ ಹೋರಾಟ ಮಾಡಿಲ್ಲ. ಅದು ಪರೋಕ್ಷವಾಗಿ ಮೀಸಲಾತಿ ತೆಗೆಯಬೇಕು ಎಂದು ಹುನ್ನಾರ ಮಾಡುತ್ತಿದೆ.
2013 ರಲ್ಲಿ ಎಸ್ ಇಪಿ, ಟಿಎಸ್ ಪಿ ಕಾನೂನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಕೇಂದ್ರ ಬಿಜೆಪಿ ಸರ್ಕಾರ ಇದೆ ಕಾರ್ಯಕ್ರಮವನ್ನು ಏಕೆ ಕೇಂದ್ರದಲ್ಲಿ ಜಾರಿಗೆ ತರದೇ ಆಟ ಆಡುತ್ತಿದೆ.
ಕರ್ನಾಟಕದಲ್ಲಿ 38 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ವರ್ಗದ ಜನರಿಗೆ ಖರ್ಚು ಮಾಡುತ್ತಿದೆ. ಬಿಜೆಪಿ ಕೇವಲ ಕಣ್ಣು ಒರೆಸುವ ಕೆಲಸ ಮಾಡುತ್ತಿದೆ.
ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ..! ಸೋಮವಾರವೂ ರಜೆ, ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು..?
ರಾಹುಲ್ ಗಾಂಧಿ ಅವರು ಅವಕಾಶ ವಂಚಿತರಿಗೆ ಸೌಲಭ್ಯ ಸಿಗಬೇಕು ಎಂದು ಹೇಳಿದ್ದಾರೆ. ಸರ್ವರಿಗೂ ಸಮಪಾಲು, ಸಮಬಾಳು ಸೇರಿದಂತೆ ಎಲ್ಲಾ ರೀತಿಯ ಹಕ್ಕು ಸಿಗಬೇಕು ಎಂದು ಹೇಳುತ್ತಾ ಇದ್ದಾರೆ.
ಬಡವರ, ದಲಿತರ ವಿರೋಧಿ ಪಕ್ಷ ಯಾವುದಾದರು ಇದ್ದರೆ ಅದು ಬಿಜೆಪಿ ಮಾತ್ರ. ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿರುವ ಬಿಜೆಪಿ ಅವರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಪ್ರಧಾನಿ ದೇಶದ ಜನರ ಕ್ಷಮೆ ಕೇಳಬೇಕು
ಈ ದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯಲ್ಲಿ ನಡೆದ ಗಣಪತಿ ಪೂಜೆಯಲ್ಲಿ ಪ್ರಧಾನಿಗಳು ಪೂಜೆ ಮಾಡಿ ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಾರೆ. ಅಲ್ಲದೇ ಜೊತೆಯಲ್ಲಿ ಫೋಟೋಗ್ರಾಫರ್ ಅವರನ್ನು ಕರೆದುಕೊಂಡು ಹೋಗಿ ಅದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.
ಮುಖ್ಯ ನ್ಯಾಯಮೂರ್ತಿಗಳ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಇರುವ ಅನೇಕ ಪ್ರಕರಣಗಳಿವೆ. ಮುಖ್ಯ ನ್ಯಾಯಮೂರ್ತಿಗಳು ರಾಷ್ಟ್ರಪತಿ, ಉಪರಾಷ್ಟ್ರಪತಿ ಅಥವಾ ವಿರೋಧ ಪಕ್ಷದ ನಾಯಕರು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯಬಹುದಿತ್ತು.
ಮಾನ್ಯ ಪ್ರಧಾನಿಗಳು ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕೆಟ್ಟ ಸಂಪ್ರದಾಯವನ್ನು ಹುಟ್ಟು ಹಾಕಿದ್ದಾರೆ. ಜನರ ಭಾವನೆಗೆದ್ದಕ್ಕೆ ತಂದಿರುವ ಇವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು.
ನಾಗಮಂಗಲದ ಜನತೆ ಯಾವುದೇ ಪಕ್ಷಗಳ ಪ್ರಚೋದನೆಗೆ ಒಳಗಾಗಬಾರದು
ಸಮಾಜದ ಶಾಂತಿಯನ್ನು ಯಾವುದೇ ವ್ಯಕ್ತಿ, ಸಂಘಟನೆ ಸೇರಿದಂತೆ ಯಾರೂ ಸಹ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಬಾರದು.
ಜನರು ಯಾವುದೇ ಪಕ್ಷ, ನಾಯಕರ ಪ್ರಚೋದನೆಗೆ ಒಳಗಾಗದೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾರ್ಥನೆ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.
ಸೀತಾರಾಮ್ ಯಚೂರಿ ಅವರಿಗೆ ಶ್ರದ್ಧಾಂಜಲಿ
ಸೀತಾರಾಮ್ ಯಚೂರಿ ಅವರ ಸಾವು ಪ್ರಜಾಪ್ರಭುತ್ವದ ಪರವಾಗಿ ನಡೆಯುತ್ತಿದ್ದ ಹೋರಾಟಗಳಿಗೆ ನಷ್ಟ ಉಂಟು ಮಾಡಿದೆ.
ತಮ್ಮ ರಾಜಕೀಯ ಜೀವನದಲ್ಲಿ ಹೋರಾಟಗಳಿಂದ ಬೆಳೆದ ನಾಯಕ. ಅವರು ಪ್ರತಿಪಾದನೆ ಮಾಡುತ್ತಿದ್ದ ವಿಚಾರಗಳನ್ನು ನಾವು ಆಚರಣೆ ಮೂಲಕ ಅನುಷ್ಠಾನಕ್ಕೆ ತಂದು ಅವರಿಗೆ ಗೌರವ ಸಲ್ಲಿಸಬೇಕು. ಈ ಕೆಲಸವನ್ನು ನಾವೆಲ್ಲ ಒಟ್ಟಾಗಿ ಸೇರಿ ಮಾಡುತ್ತೇವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.