ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೇಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್, ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:


ಇದನ್ನೂ ಓದಿ: ನಟಿಯರನ್ನು ಏಕೆ ಗಂಡಸರು ಆ ರೀತಿ ನೋಡ್ತಾರೆ..!? ಕಿಡಿಕಾರಿದ ನಟಿ ಚಾಂದಿನಿ


"ರಾಜ್ಯ ಸರ್ಕಾರ ಸಂಪನ್ಮೂಲ ಕ್ರೂಢೀಕರಣಗಳತ್ತ ಹೆಚ್ಚು ಗಮನಹರಿಸುತ್ತಿದ್ದು, ಬೇರೆಯವರಂತೆ ನಾವು ಕೂಡ ಅನೇಕರ ಸಲಹೆ ಕೇಳಿದ್ದೇವೆ. ನಾವು ಬಿಜೆಪಿಯವರಂತೆ ಹಣಕಾಸಿಗಾಗಿ ಸರ್ಕಾರಿ ಆಸ್ತಿಗಳನ್ನು ಅಡಮಾನ ಇಡುತ್ತಿಲ್ಲ. ಸರ್ಕಾರದ ಹಾಗೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ” ಎಂದು ತಿಳಿಸಿದರು.


ಚನ್ನಪಟ್ಟದಲ್ಲಿ ನೀವೆ ಸ್ಪರ್ಧೆ ಮಾಡುವಂತೆ ಜನ ನಿರೀಕ್ಷೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ” ಎಂದು ತಿಳಿಸಿದರು.


ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಮ್ಮ ಸ್ಪರ್ಧೆ ಬಗ್ಗೆ ಬೇರೆ ಬೇರೆ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಯಾರು ಏನೇ ಅಭಿಪ್ರಾಯ ಹೇಳಲಿ. ಜನರ ಜತೆ ಚರ್ಚೆ ಮಾಡಿದ ಬಳಿಕ ನನ್ನ ಅಭಿಪ್ರಾಯ ತೀರ್ಮಾನಿಸುತ್ತೇನೆ” ಎಂದರು.


ಗ್ಯಾರಂಟಿಯಿಂದ ಬೆಲೆ ಏರಿಕೆ ಮಾಡಿಲ್ಲ:


ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂಬ ಎನ್ ಡಿಎ ಸಂಸದರ ಆರೋಪದ ಬಗ್ಗೆ ಕೇಳಿದಾಗ, “ಯಾರು ಏನಾದರೂ ಆರೋಪ ಮಾಡಲಿ. ಗ್ಯಾರಂಟಿ ಯೋಜನೆಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ. ಕಾಲಕಾಲಕ್ಕೆ ಆಗಬೇಕಿರುವ ಬೆಲೆ ಏರಿಕೆ ನಾವು ಮಾಡಿದ್ದೇವೆ. ನಾವು ಬಿಜೆಪಿಯವರಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿಲ್ಲ. ಬಿಜೆಪಿ ಕಚ್ಛಾತೈಲ ಬೆಲೆ ಕುಸಿದಾಗಲೂ ಬೆಲೆ ಏರಿಕೆ ಮಾಡಿದ್ದಾರೆ. ನಾವು ಬಹಳ ಕಡಿಮೆ ಪ್ರಮಾಣದಲ್ಲಿ ನೆರೆ ರಾಜ್ಯಗಳ ಬೆಲೆ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಇಂಧನ ತೈಲ ಬೆಲೆ ಏರಿಕೆ ಮಾಡಿದ್ದೇವೆ. ನಮ್ಮ ಗ್ಯಾರಂಟಿಗಳು ಮುಂದುವರಿಯಲಿದೆ. ರಾಜ್ಯದ ಅಭಿವೃದ್ಧಿಗೆ ಏನು ಮಾಡಬೇಕೋ ಆ ಕೆಲಸ ಮಾಡುತ್ತೇವೆ” ಎಂದರು.


ಸೂರಜ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಕೇಳಿದಾಗ, “ಅವರ ಕುಟುಂಬದಲ್ಲಿ ದೊಡ್ಡವರಿದ್ದಾರೆ. ಅವರು ಉತ್ತರ ನೀಡುತ್ತಾರೆ. ನಮಗೆ ಆ ವಿಚಾರ ಬೇಡ” ಎಂದರು.


ಮಾಜಿ ಮೇಯರ್ ಗಳ ಸಮಿತಿ ರಚನೆ:


ಕಾಂಗ್ರೆಸ್ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಕಾಂಗ್ರೆಸ್ ಪಕ್ಷದ ಬೆಂಗಳೂರು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಇಂದು ಮಾಜಿ ಮೇಯರ್ ಹಾಗೂ ಉಪಮೇಯರ್ ಗಳ ಜತೆ ಸಭೆ ಮಾಡಿ ಬೆಂಗಳೂರಿನ ಆಚಾರ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ನಮ್ಮ ನಾಯಕರ ಅಭಿಪ್ರಾಯ ಕೇಳಿದ್ದೇವೆ. ಚುನಾವಣೆ ತಯಾರಿ ಬಗ್ಗೆ ಅನೇಕ ಸಲಹೆ ನೀಡಿದ್ದಾರೆ.


ಮಾಜಿ ಮೇಯರ್ ಗಳ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಎ ಖಾತೆ, ಬಿ ಖಾತೆ ಸೇರಿದಂತೆ ಅನೇಕ ಸಾರ್ವಜನಿಕ ಸಮಸ್ಯೆಗಳು ಹಾಗೂ ಆಡಳಿತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ಬಗ್ಗೆ ಈ ಸಮಿತಿ ಅಧ್ಯಯನ ಮಾಡಿ ವರದಿ ನೀಡಲಿದೆ. ಮುಂದಿನ ಎಂಟು ಹತ್ತು ದಿನಗಳಲ್ಲಿ ಮತ್ತೊಮ್ಮೆ ಸಭೆ ಮಾಡುತ್ತೇವೆ. ಸಮಿತಿ ವರದಿ ಮೇಲೆ ಮುಖ್ಯಮಂತ್ರಿಗಳು ಹಾಗೂ ಶಾಸಕರ ಜತೆ ಚರ್ಚೆ ಮಾಡುತ್ತೇವೆ. ನಂತರ ನಮ್ಮ ಕಾರ್ಯಯೋಜನೆ ರೂಪಿಸುತ್ತೇವೆ.


ಬಿಬಿಎಂಪಿ ಚುನಾವಣೆ ಮಾಡುತ್ತೀರಾ ಎದು ಕೇಳಿದಾಗ, “ಖಂಡಿತವಾಗಿ ಅದನ್ನು ಮಾಡಲೇಬೇಕು. ಅದನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ” ಎಂದರು. 


ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ:


ಅನಾರೋಗ್ಯದಿಂದ ವಿಧಿವಶರಾದ ಹಿರಿಯ ಸಾಹಿತಿ ಕಮಲಾ ಹಂಪನಾ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು.


ಇದನ್ನೂ ಓದಿ: ಗಂಟುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗಿಸಲು ಸಂಜೀವಿನಿ ಈ ಹಣ್ಣು! ತಿಂದರೆ ಕಿಡ್ನಿಸ್ಟೋನ್ ಕೂಡ ತನ್ನಿಂತಾನೆ ಕರಗಿ ಹೋಗುತ್ತೆ


ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಚಿಕ್ಕ ವಯಸ್ಸಿನಿಂದ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಾ ಸುದೀರ್ಘ 60 ವರ್ಷಗಳ ಕಾಲ ಸಾಹಿತ್ಯ ಸೇವೆ ಸಲ್ಲಿಸಿರುವ ಕಮಲಾ ಹಂಪನಾ ಅವರ ಅಗಲಿಕೆ ಬಹಳ ನೋವು ತಂದಿದೆ. ಈ ಕುಟುಂಬದ ಜತೆ ನನಗೆ 50 ವರ್ಷಗಳ ಒಡನಾಟವಿದೆ. ಇವರ ಪುತ್ರ ಹರ್ಷ ಹಾಗೂ ನಾನು ಬಾಲ್ಯದಲ್ಲಿ ಒಟ್ಟಿಗೆ ಓದಿದವರು. ಕಮಲಾ ಹಂಪನಾ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅವರ ಸಾಹಿತ್ಯ ಸೇವೆ ದಾಖಲೆಗಳಲ್ಲಿ ಉಳಿದುಕೊಂಡಿವೆ. ಅವರು ಬಹಳ ಧೈರ್ಯದಿಂದ ಮಾತನಾಡುತ್ತಿದ್ದರು. ನಾವು ಈ ಕುಟುಂಬದ ಪರವಾಗಿದ್ದೇವೆ ಎಂದು ಧೈರ್ಯ ತುಂಬಲು ನಾನು ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮುಂದಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅವರಿಗೆ ಏನೆಲ್ಲಾ ಗೌರವ ಸಲ್ಲಿಸಬಹುದೋ ಅದನ್ನು ಸಲ್ಲಿಸುತ್ತೇವೆ” ಎಂದರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ