ಬೆಂಗಳೂರು: ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು-ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಜೊತೆಗೆ ಮಾತನಾಡಿದ ಅವರು, ಶಾಸಕ ಬಸವರಾಜ ರಾಯರೆಡ್ಡಿ ಅವರು ಸಿಎಂ ಸಿದ್ದರಾಮಯ್ಯಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪಶ್ನೆಗೆ ಪ್ರತಿಕ್ರಿಯಿಸಿದರು. ‘ಪಕ್ಷದ ಒಳಗೆ ಶಿಸ್ತು ಇದೆ, ಯಾವುದೇ ತೊಂದರೆ ಇಲ್ಲ. ಯಾವ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊಂದಿಲ್ಲ, ಇದೆಲ್ಲವೂ ಮಾಧ್ಯಮಗಳ ಸೃಷ್ಟಿ’ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: "ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ"
ಇಸ್ರೋ ಸೂರ್ಯಯಾನಕ್ಕೆ ಶುಭವಾಗಲಿ!
ಇಸ್ರೋ ಸಂಸ್ಥೆ ಈಗ ಸೂರ್ಯಯಾನ ಯೋಜನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, ‘ಚಂದ್ರಯಾನ-3ರ ಯಶಸ್ಸಿನ ನಂತರ ಸೂರ್ಯಯಾನ ಮಾಡುತ್ತಿರುವ ಇಸ್ರೋಗೆ ಅಭಿನಂದನೆಗಳು. ಕರ್ನಾಟಕದಿಂದ ಭಾರತಕ್ಕೆ ಗೌರವ ತರುವಂತಹ ಕೆಲಸವನ್ನು ನಮ್ಮ ಇಸ್ರೋ ವಿಜ್ಞಾನಿಗಳು ಮಾಡುತ್ತಿದ್ದಾರೆ. ಪ್ರಯೋಗ, ಪ್ರಯತ್ನ, ಸಾಹಸ ಎಲ್ಲವನ್ನು ಮಾಡುತ್ತಿದ್ದಾರೆ. ಬಹಳ ಕಷ್ಟಪಟ್ಟು ತಮ್ಮ ಬುದ್ಧಿ ಶಕ್ತಿಯನ್ನೆಲ್ಲಾ ಬಳಸಿ ಈ ಕೆಲಸ ಮಾಡುತ್ತಿರುವ ಅವರ ಮತ್ತೊಂದು ಸಾಹಸ ಯಶ ಕಾಣಲಿ’ ಎಂದು ಶುಭ ಹಾರೈಸಿದರು.
‘ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗಿ ಬಂದ್‌ಗೆ ಕರೆ ನೀಡಿದ್ದಾರೆ ಎನ್ನುವ ಪ್ರಶ್ನೆಗೆ ‘ಹೌದು, ಖಾಸಗಿ ಬಸ್ ಮಾಲೀಕರಿಗೆ ತೊಂದರೆಯಾಗಿರುವುದು ನನ್ನ ಗಮನಕ್ಕೂ ಬಂದಿದೆ. ನಾನು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರನ್ನು ಭೇಟಿಯಾಗಿ ಇದಕ್ಕೆ ಪರಿಹಾರ ಕಂಡು ಹಿಡಿಯುತ್ತೇವೆ’ ಎಂದು ಹೇಳಿದರು.
ಇದನ್ನೂ ಓದಿ: ADITYA L1 LAUNCH: ಆದಿತ್ಯ ಉಪಗ್ರಹ ಯಶಸ್ಸಿಗೆ ಹಾರೈಸಿ ಯೋಗಪಟುಗಳಿಂದ ಸೂರ್ಯ ನಮಸ್ಕಾರ
‘ಅನೇಕ ಊರುಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಪರ್ಕವೇ ಇಲ್ಲ, ಅವರೆಲ್ಲಾ ಖಾಸಗಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಆದ ಕಾರಣ ಒಂದು ಪರಿಹಾರ ಸೂತ್ರ ಕಂಡುಹಿಡಿಯಲಾಗುವುದು. ನನ್ನನ್ನೂ ಸಹ ಖಾಸಗಿ ಬಸ್ ಮಾಲೀಕರು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿದ್ದರು. ಈ ಸಮಸ್ಯೆಯನ್ನು ಬೇಗ ಬಗೆಹರಿಸಲಾಗುವುದು’ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.