'ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?'

ಕಾಂಗ್ರೆಸ್ ಅವಧಿ ಭ್ರಷ್ಟಾಚಾರದ ಹಗರಣಗಳನ್ನು ಜನರ ಮುಂದಿಡುವುದಾಗಿ ಹೇಳಿದ್ದ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ಅವರು ಹೇಳಿದ್ದಾರೆ.

Written by - Zee Kannada News Desk | Last Updated : Apr 18, 2022, 09:35 PM IST
  • ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
'ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?' title=
file photo

ಬೆಂಗಳೂರು: ಕಾಂಗ್ರೆಸ್ ಅವಧಿ ಭ್ರಷ್ಟಾಚಾರದ ಹಗರಣಗಳನ್ನು ಜನರ ಮುಂದಿಡುವುದಾಗಿ ಹೇಳಿದ್ದ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಲಭೈರವ ಎದ್ದು ಕುಣಿಯುವ ಸಮಯ ಬಂದಿದೆ : ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಇದೇ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಅವರು ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಪಡೆಯಲು ಶೇ 30 ರಷ್ಟು ಕಮಿಷನ್ ನೀಡಬೇಕಾಗಿದೆ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿಜಿ ಅವರು ಮಾಡಿರುವ  ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು 'ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು.10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ.ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : "ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಲೋದಿಲ್ಲ : ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ"

ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯನವರು ಅಗತ್ಯ ವಸ್ತುಗಳ ಬೆಲೆಯೇರಿಕೆ ಮೂಲಕ ಬಡ ಜನರ ರಕ್ತ ಹೀರುತ್ತಿರುವ ಕೇಂದ್ರ ಸರ್ಕಾರ ಒಂದೆಡೆಯಾದರೆ ಇನ್ನೊಂದೆಡೆಗೆ 40% ಕಮಿಷನ್ ಹಪಹಪಿಗೆ ಗುತ್ತಿಗೆದಾರನ ಬಲಿ ತೆಗೆದುಕೊಂಡಿದೆ ಎಂದು ಅವರು ಆರೋಪಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News