ಬೈಕ್ ವ್ಹೀಲಿಂಗ್ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್; ಎಸ್.ಪಿ ಕೊಟ್ಟ ಎಚ್ಚರಿಕೆ ಏನು ಗೊತ್ತಾ..?

Bike Wheeling : ಬೈಕ್ ವ್ಹೀಲಿಂಗ್‌ಗೆ ಸಂಪೂರ್ಣ ಬ್ರೇಕ್ ಹಾಕಲು ಸಜ್ಜಾಗಿರುವ ಪೊಲೀಸ್ ಇಲಾಖೆ ರೋಡ್ ರೋಮಿಯೋಗಳು, ಪುಂಡರ ಹೆಡೆಮುರಿ ಕಟ್ಟಲು ಪ್ರೀಲ್ಡ್‌ಗೆ ಇಳಿದಿದೆ.

Written by - Savita M B | Last Updated : Jul 8, 2023, 08:44 AM IST
  • ಮೂವರು ಅಪ್ರಾಪ್ತರು ಸೇರಿ 9 ಮಂದಿಯನ್ನು ಬಂಧಿಸಿ, 30 ಬೈಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ.
  • ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿದ್ದಾರೆ
  • 27 ಸೈಲೆನ್ಸರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬೈಕ್ ವ್ಹೀಲಿಂಗ್ ಮಾಡಿದ್ರೆ ಬೀಳುತ್ತೆ ಕ್ರಿಮಿನಲ್ ಕೇಸ್; ಎಸ್.ಪಿ ಕೊಟ್ಟ ಎಚ್ಚರಿಕೆ ಏನು ಗೊತ್ತಾ..? title=

SP Hariram Shankar on Bike Wheeling : ಕೆಲ ದಿನಗಳಿಂದ ಬಿಡುವಿಲ್ಲದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆಯುತ್ತಿದ್ದ ಮೂವರು ಅಪ್ರಾಪ್ತರು ಸೇರಿ 9 ಮಂದಿಯನ್ನು ಬಂಧಿಸಿ, 30 ಬೈಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ. 

ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ವ್ಹೀಲಿಂಗ್ ಮಾಡಿ ಕಿರಿಕಿರಿ ಉಂಟು ಮಾಡುತ್ತಿದ್ದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಬಂಧಿತ ಒಂಭತ್ತು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ವ್ಹೀಲಿಂಗ್ ಮಾಡುತ್ತಿದ್ದವರ 9 ಬೈಕ್ ಜೊತೆಗೆ ಕರ್ಕಶ ಸದ್ದು ಮಾಡುವಂತೆ ಬೈಕ್ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡು, ಪಾದÀಚಾರಿಗಳು, ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರ ಮೇಲೂ ಕ್ರಮ ಕೈಗೊಳ್ಳಲಾದೆ. ಆ ರೀತಿಯ 15 ಬೈಕ್‌ಗಳನ್ನು ವಶಕ್ಕೆ ಪಡೆದು ಅದರಲ್ಲಿನ ಸೈಲೆನ್ಸರ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು, ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. 

ಇದನ್ನೂ ಓದಿ-ದೋಷಯುಕ್ತ ಮೊಬೈಲ್ ಸರಬರಾಜು ಮಾಡಿದ ಆಸಿಸ್ ಕಂಪನಿಗೆ ರೂ.78 ಸಾವಿರ ದಂಡ

ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಮೆಕ್ಯಾನಿಕ್ ಶಾಪ್ ಹಾಗು ದ್ವಿಚಕ್ರ ವಾಹನ ಬಿಡಿಭಾಗಗಳ ಮಾರಾಟ ಅಂಗಡಿಗಳ ಮೇಲೂ ದಾಳಿ ನಡೆಸಿ 27 ಸೈಲೆನ್ಸರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಗರದ ಸಹ್ಯಾದ್ರಿ ವೃತ್ತದ ಬಳಿ ವ್ಹೀಲಿಂಗ್ ಮಾಡಿಕೊಂಡು ಇಬ್ಬರು ಯುವತಿಯರಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಮಾಡಿದ ಪ್ರಕರಣ ಮತ್ತು ನಕಲಿ ಬಂದೂಕು ಹಿಡಿದು ಬೈಕ್‌ನಲ್ಲಿ ಅಲೆದಾಡುತ್ತಿದ್ದ ಇಬ್ಬರು ಯುವಕರು ಪತ್ತೆಯಾದ ಪ್ರಕರಣಗಳ ನಂತರ ಕಾರ್ಯಾಚರಣೆಯನ್ನು ತೀವ್ರಗೊಳಿಸಿ, ವ್ಹೀಲಿಂಗ್ ಮಾಡುವವರನ್ನು ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಅಕೌಂಟ್‌ಗಳನ್ನು ಪರಿಶೀಲಿಸಿ ಅದರಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೋ ಹಾಗು ಫೋಟೋಗಳನ್ನು ಆಧರಿಸಿ ಪುಂಡರನ್ನು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ-Karnataka Budget 2023-24: ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಪಾಲು..?

ಸಂಚಾರ ನಿಯಮ ಉಲ್ಲಂಘಿಸಿ ಸಾರ್ವಜನಿಕರಿಗೆ ತೊಂದರೆ ನೀಡುವವರ ಚಾಲನಾ ಪರವಾನಗಿ ರದ್ದು ಮಾಡುವ ಸಂಬಂಧ ಆರ್‌ಟಿಓ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ಆ ಕೆಲಸವನ್ನೂ ಮಾಡಲಾಗುವುದು. ಪುಂಡಾಟ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತರ ಪೋಸಕರನ್ನು ಠಾಣೆಗೆ ಕರೆಸಿ ತಿಳುವಳಿಕೆ ಹೇಳಿರುವ ಜೊತೆಗೆ ಬೈಕ್ ಮೆಕ್ಯಾನಿಕ್‌ಗಳ ಸಭೆ ನಡೆಸಿ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ತಿಳಿಸಿದರು. 

ಅಪರಾಧ ಪ್ರಕರಣಗಳು ಕಂಡುಬಂದರೆ ಸಾರ್ವಜನಿಕರು ಅದರ ವೀಡಿಯೋ ಅಥವಾ ಫೊಟೋ ತೆಗೆದು ಹತ್ತಿರದ ಪೊಲೀಸ್ ಠಾಣೆಗೆ ಅಥವಾ ತಮಗೆ ಕಳುಹಿಸಬೇಕು. ಸಮಾಜದಲ್ಲಿ ಶಾಂತಿ ಕಾಪಾಡಲು ಸಾರ್ವಜನಿಕರ ಸಹಭಾಗಿತ್ವವೂ ಪೊಲೀಸ್ ಇಲಾಖೆಗೆ ಅಗತ್ಯವಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

 

Trending News