ಬೆಂಗಳೂರು: ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು ಸಿಎಂ ಹೇಳಿದ್ದಾರೆ.


ಇದನ್ನೂ ಓದಿ: ಪ್ರಥಮ ಬಾರಿಗೆ ಶಾಸಕನಾದ ವ್ಯಕ್ತಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿ..! ಏಕೆ ಗೊತ್ತೆ..?


ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ.ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದಿದ್ದಾರೆ.


ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ  ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು.ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದರು.


ಇದನ್ನೂ ಓದಿ: ಸಾಂವಿಧಾನಿಕವೇ ಅಥವಾ ಕಾನೂನುಬಾಹಿರವೇ?


ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.