ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. 


COMMERCIAL BREAK
SCROLL TO CONTINUE READING

ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ದಲಿತರು ಹಾಗೂ ಮಹಿಳೆಯರು ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಂಥವರಿಗೆ ನಮ್ಮ ಈ ಯೋಜನೆ ಬಲ ತುಂಬಲಿದೆ.


ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಎಂದು ಹೇಳಿದರು.


ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ.ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ   ಅನ್ವಯವಾಗುತ್ತದೆ. ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ ಎನ್ನುವ ಭರವಸೆ ನೀಡಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.